ಉಡುಪಿ, ಫೆ. 1: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಉಡುಪಿಯಲ್ಲಿ ಫೆಬ್ರವರಿ 11 ಮತ್ತು 12ರಂದು ನಡೆಸುತ್ತಿರುವ ರಾಜ್ಯಮಟ್ಟದ ಪ್ರಥಮ ಯಕ್ಷಗಾನ ಸಮ್ಮೇಳನದ ಅಧಿಕೃತ ಆಹ್ವಾನ ಪತ್ರಿಕೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ಅವರು ಉಚ್ಚಿಲದ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಆವರಣದಲ್ಲಿ ಇಂದು ಬಿಡುಗಡೆಗೊಳಿಸಿದರು
ಕಾಳಹಸ್ತೇಂದ್ರ ಮಹಾಸ್ವಾಮೀಜಿ, ಡಾ.ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಅಧ್ಯಕ್ಷ ಜಿ. ಶಂಕರ್, ಸಮ್ಮೇಳನದ ಕಾರ್ಯಾಧ್ಯಕ್ಷ ಡಾ. ಜಿ.ಎಲ್.ಹೆಗಡೆ, ಕಾಪು ಶಾಸಕ ಲಾಲಾಜಿ ಆರ್ ಮೆಂಡನ್, ದಿ. ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ನ ಅಧ್ಯಕ್ಷ ಉದಯಕುಮಾರ್ ಶೆಟ್ಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೈಸೂರು ವಿಭಾಗದ ಜಂಟಿ ನಿರ್ದೇಶಕ ವಿ.ಎನ್. ಮಲ್ಲಿಕಾರ್ಜುನ ಸ್ವಾಮಿ, ಕರ್ನಾಟಕ ಯಕ್ಷಗಾನ ಅಕಾಡೆಮಿಯ ರಿಜಿಸ್ಟ್ರಾರ್ ಎಸ್.ಹೆಚ್. ಶಿವರುದ್ರಪ್ಪ, ಮಟ್ಟಾರ್ ರತ್ನಾಕರ ಹೆಗ್ಡೆ, ಸಮ್ಮೇಳನದ ಪ್ರಧಾನ ಸಂಚಾಲಕ ಪಿ. ಕಿಶನ್ ಹೆಗ್ಡೆ, ಸಂಚಾಲಕ ಮುರಳಿ ಕಡೆಕಾರ್, ಗೀತಾನಂದ ಫೌಂಡೇಶನ್ ಕೋಟ ಪ್ರವರ್ತಕ ಆನಂದ್ ಸಿ. ಕುಂದರ್, ಶ್ರೀ ಮಹಾಲಕ್ಷ್ಮಿ ಕೋ. ಬ್ಯಾಂಕ್ ನ ಅಧ್ಯಕ್ಷ ಯಶ್ಪಾಲ್ ಸುವರ್ಣ ಮುಂತಾದವರು ಉಪಸ್ಥಿತರಿದ್ದರು.