Saturday, November 23, 2024
Saturday, November 23, 2024

ಫೆ. 7 ರಂದು ಉಡುಪಿ ಜಿಲ್ಲೆಯಲ್ಲಿ ವಿದ್ಯುತ್ ವ್ಯತ್ಯಯ

ಫೆ. 7 ರಂದು ಉಡುಪಿ ಜಿಲ್ಲೆಯಲ್ಲಿ ವಿದ್ಯುತ್ ವ್ಯತ್ಯಯ

Date:

ಉಡುಪಿ, ಫೆ.4: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಫೆಬ್ರವರಿ 7 ರಂದು ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ. 33/11 ಕೆವಿ ಹೆಬ್ರಿ ಉಪ ವಿದ್ಯುತ್ ಸ್ಥಾವರದಲ್ಲಿ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ 11ಕೆವಿ ವಾಟರ್ ಸಪ್ಲೈ, ನಾಡ್ಪಾಲು ಫೀಡರ್‌ನಲ್ಲಿ ವಿದ್ಯುತ್ ಅಡಚಣೆಯಾಗುವುದರಿಂದ, 33/11ಕೆವಿ ಹೆಬ್ರಿ ಉಪಕೇಂದ್ರದಿಂದ ಸರಬರಾಜಾಗುವ ಹುಟ್ಟುರ್ಕೆ ವಾಟರ್ ಸಪ್ಲೈ, ಕಲ್ಲಿಲ್ಲು ವಾಟರ್ ಸಪ್ಲೈ, ಸೀತಾನದಿ, ಸೋಮೇಶ್ವರ, ನಾಡ್ಪಾಲು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

110/33/11 ಕೆವಿ ವಿದ್ಯುತ್ ಸ್ಥಾವರ ಮಣಿಪಾಲದಲ್ಲಿ 110 ಕೆ.ವಿ ಬಸ್‌ನ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಸದರಿ ಸ್ಥಾವರದಿಂದ ಹೊರಡುವ ಮಣಿಪಾಲ, ನಿಟ್ಟೂರು, ಬ್ರಹ್ಮಾವರ, 33ಕೆವಿ ಶಿರ್ವ, 33ಕೆವಿ ಕುಂಜಿಬೆಟ್ಟು 1 ಮತ್ತು 2 ಮಾರ್ಗಗಳಲ್ಲಿ, 33 ಕೆವಿ ಮಲ್ಪೆ/ಉದ್ಯಾವರ ಹಾಗೂ ಎಲ್ಲಾ 11ಕೆವಿ ಫೀಡರಿನಲ್ಲಿ ಉಡುಪಿ, ಮಣಿಪಾಲ, ಕುಂಜಿಬೆಟ್ಟು, ನಿಟ್ಟೂರು, ಮಲ್ಪೆ, ಉದ್ಯಾವರ, ಶಿರ್ವ, ಬ್ರಹ್ಮಾವರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಬೆಳಗ್ಗೆ 10 ರಿಂದ ಸಂಜೆ 4 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಕಾಪು ತಾಲೂಕು ಬೆಳಪು ಗ್ರಾಮದಲ್ಲಿ 2*10 ಎಂ.ವಿ.ಎ, 110/11ಕೆವಿ ವಿದ್ಯುತ್ ಕೇಂದ್ರ ಮತ್ತು 110/11ಕೆವಿ ವಿದ್ಯುತ್ ಕೇಂದ್ರ ನಂದಿಕೂರಿನಿಂದ 110/11ಕೆವಿ ವಿದ್ಯುತ್ ಕೇಂದ್ರ ಬೆಳಪುವರೆಗೆ 110ಕೆವಿ ವಿದ್ಯುತ್ ಪ್ರಸರಣ ಮಾರ್ಗ ನಿರ್ಮಾಣದ ಕಾಮಗಾರಿಗೆ ಸಂಬಂಧಿಸಿದಂತೆ 110 ಕೆವಿ ನಂದಿಕೂರು-ಐಎಸ್ ಪಿಆರ್ ಎಲ್ ಏಕ ವಿದ್ಯುತ್ ಪ್ರಸರಣ ಮಾರ್ಗದಲ್ಲಿ ಎರಡನೇ ವಿದ್ಯುತ್ ಪ್ರಸರಣ ಮಾರ್ಗವನ್ನು ಅಳವಡಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ, 110/11ಕೆವಿ ನಂದಿಕೂರು ವಿದ್ಯುತ್ ಸ್ಥಾವರದಿಂದ ಹೊರಡುವ 110ಕೆವಿ SUZ & ISP ಮತ್ತು ಎಲ್ಲಾ 11ಕೆವಿ ಮಾರ್ಗಗಳಾದ ಅಡ್ವೆ, ಸಾಂತೂರು, ಬಲ್ಕುಂಜೆ, ನಂದಿಕೂರು, ಎಲ್ಲೂರು, ಪಲಿಮಾರು, ಎರ್ಮಾಳು, ಬ್ರೈಟ್ ಫ್ಲೆಕ್ಸಿ, ಯಾಶ್ ಟೆಕ್ ಹಾಗೂ ಬೆಳಪು ಮಾರ್ಗಗಳಲ್ಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 8 ರಿಂದ ಸಂಜೆ 6 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾವ್ಯವನ್ನು ರಂಗರೂಪಕ್ಕೆ ತರುವುದು ಸಾಹಸ: ಪ್ರೊ.ಬಿ.ಎ. ವಿವೇಕ ರೈ

ಮೂಡುಬಿದಿರೆ, ನ.23: ಬರಹ ಅಥವಾ ಕಾವ್ಯವನ್ನು ರಂಗರೂಪಕ್ಕೆ ತರುವುದು ಒಂದು ಸಾಹಸ....

ನಮ್ಮ ಉಳಿವಿಗಾಗಿ ಪಶ್ಚಿಮ ಘಟ್ಟದ ಸಂರಕ್ಷಣೆ ಅತ್ಯಗತ್ಯ

ಮಂಗಳೂರು, ನ.23: ‘ಸಾರ ಸಂಸ್ಥೆ’ ‘ಪರಿಸರಕ್ಕಾಗಿ ನಾವು’ ವೇದಿಕೆಯ ಸಹಯೋಗದೊಂದಿಗೆ ಡಾ....

ಉಡುಪಿ ಜ್ಞಾನಸುಧಾ ವಿದ್ಯಾರ್ಥಿಗಳು ವಿಭಾಗ ಮಟ್ಟಕ್ಕೆ ಆಯ್ಕೆ

ಉಡುಪಿ, ನ.23: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಮತ್ತು ಶಾಲಾ ಶಿಕ್ಷಣ...

ಪ್ರಧಾನಮಂತ್ರಿ ಫಸಲ್ ಬಿಮಾ ಹಿಂಗಾರು ಮತ್ತು ಬೇಸಿಗೆ ಹಂಗಾಮು ಯೋಜನೆ

ಉಡುಪಿ, ನ.22: ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿಗೆ ಮುಖ್ಯ ಬೆಳೆಯಾದ ಭತ್ತವನ್ನು ಗ್ರಾಮ...
error: Content is protected !!