ಉಡುಪಿ, ಫೆ. 8: ಭಾರತದ ಗಣತಂತ್ರ ದಿವಸದ ಪ್ರಯುಕ್ತ ಬೆಂಗಳೂರಿನಲ್ಲಿ ಆಯೋಜಿಸಲಾದ ರಾಜ್ಯ ಮಟ್ಟದ ಆನ್‌ಲೈನ್- ವರ್ಚುವಲ್ ಮೋಡ್‌ನಲ್ಲಿ ನಡೆದ ರಾಷ್ಟ್ರೀಯ ಯುವ ಸಂಸತ್ ಉತ್ಸವ -2023 ಭಾಷಣ ಸ್ಪರ್ಧೆಯಲ್ಲಿ ಜಿಲ್ಲೆಯ ವೈಕುಂಟ ಬಾಳಿಗ ಕಾನೂನು ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿ ವಾಸುದೇವ ತಿಲಕ್ ಅವರು ಭಾರತದಲ್ಲಿ ಮಹಿಳಾ ಸುರಕ್ಷತೆ – ಸವಾಲುಗಳು ಮತ್ತು ಪರಿಹಾರ ವಿಷಯದಲ್ಲಿ ದ್ವಿತೀಯ ಸ್ಥಾನ ಹಾಗೂ ಮಾಹೆ ಮಣಿಪಾಲದ ಸಮೂಹ ಸಂವಹನ ಮತ್ತು ಮಾಧ್ಯಮದ ವಿದ್ಯಾರ್ಥಿನಿ ಲೇರಿಸಾ ಡಿಸೋಜ ಅವರು ಹವಾಮಾನ ಬದಲಾವಣೆ ಮತ್ತು ವಿಪತ್ತು ಅಪಾಯ ಕಡಿತ: ಸುಸ್ಥಿರತೆಯನ್ನು ಜೀವನ ಮಾರ್ಗವಾಗಿ ಮಾಡುವುದು ಎಂಬ ವಿಷಯದ ಕುರಿತ ಇಂಗ್ಲೀಷ್ ಭಾಷೆಯ ಭಾಷಣ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿದ್ದು, ಇವರಿಬ್ಬರು ಇದೇ ತಿಂಗಳ ಅಂತಿಮ ವಾರದಲ್ಲಿ ನವದೆಹಲಿಯ ಸಂಸತ್ ಭವನದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ರಾಷ್ಟ್ರೀಯ ಯುವ ಸಂಸತ್ ಉತ್ಸವ -2023 ರಲ್ಲಿ ಭಾಗವಹಿಸಲು ಆಯ್ಕೆಯಾಗಿರುತ್ತಾರೆ ಎಂದು ನೆಹರು ಯುವ ಕೇಂದ್ರದ ಜಿಲ್ಲಾ ಯುವ ಸಮನ್ವಯ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಉಡುಪಿ ವಿದ್ಯಾರ್ಥಿಗಳ ಸಾಧನೆ
ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಉಡುಪಿ ವಿದ್ಯಾರ್ಥಿಗಳ ಸಾಧನೆ
Date: