ಕಾರ್ಕಳ, ಫೆ. 11: ಕ್ರೀಡಾಕೂಟದಲ್ಲಿ ಭಾಗವಹಿಸುವುದರಿಂದ ಮಾನಸಿಕ ಹಾಗೂ ಶಾರೀರಿಕ ಬೆಳವಣಿಗೆಗೆ ಸಹಕಾರಿಯಾಗುತ್ತದೆ ಎಂದು ಪ್ರಕೃತಿ ಗ್ರೂಪ್ ಆಫ್ ಇನ್ಸ್ಟಿಟ್ಯೂಟ್ ಸಾಣೂರು ಇದರ ಪದವಿಪೂರ್ವ ಕಾಲೇಜಿನ ಉಪಪ್ರಾಂಶುಪಾಲರಾದ ಪ್ರಸಾದ್ ಜಿ ಹೇಳಿದರು. ಅವರು ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಉಡುಪಿ ಹಾಗೂ ರಾಜ್ಯ ಪ್ರಶಸ್ತಿ ಪುರಸ್ಕೃತ ಯುವಕ ಮಂಡಲ (ರಿ.) ಸಾಣೂರು ಇವರ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಅಂತರ್ ಯುವ ಮಂಡಲಗಳ ಕ್ರೀಡಾಕೂಟ 2023 ಸಮಾರೋಪ ಮತ್ತು ಬಹುಮಾನ ವಿತರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಾಣೂರು ಯುವಕ ಮಂಡಲದ ಪ್ರಧಾನ ಮಹಾ ಪೋಷಕ ಸದಸ್ಯರಾದ ರಿತಿನ್ ಶೆಟ್ಟಿ, ಉಷಾನಂದ ಏರ್ನಡ್ಕಗುತ್ತು, ಶುಭಕರ್ ಶೆಟ್ಟಿ, ಜ್ಯೋತಿನಿವಾಸ ಸಾಣೂರು, ಸಂದೀಪ್ ಪುತ್ರನ್, ಸಂತೋಷ್ ಕೋಟ್ಯಾನ್ ಪಿಲಿಕಲ್ ಪೆರಂಗೋಡಿಗುತ್ತು, ಸುಲೈಮಾನ್, ಮಂಡಲದ ಕ್ರೀಡಾ ಕಾರ್ಯದರ್ಶಿ ರೋಹಿತ್ ಆರ್. ಕೆ ಉಪಸ್ಥಿತರಿದ್ದರು.
ಸಾಣೂರು ಯುವಕ ಮಂಡಲದ ಅಧ್ಯಕ್ಷರಾದ ಪ್ರಸಾದ್ ಪೂಜಾರಿ ಸ್ವಾಗತಿಸಿ, ಉಪಾಧ್ಯಕ್ಷರಾದ ಪ್ರಸಾದ್ ಶೆಟ್ಟಿ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ಕಾರ್ಯದರ್ಶಿ ಮೋಹನ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಗುಂಪು ಸ್ಪರ್ಧೆಯಲ್ಲಿ ಯುವಕರ ವಿಭಾಗದಲ್ಲಿ ಕಬಡ್ಡಿ, ವಾಲಿಬಾಲ್, ಹಗ್ಗಜಗ್ಗಾಟ, ಯುವತಿಯರ ವಿಭಾಗದಲ್ಲಿ ತ್ರೋಬಾಲ್, ಹಗ್ಗಜಗ್ಗಾಟ, ಕಬಡ್ಡಿ, ವೈಯುಕ್ತಿಕ ಸ್ಪರ್ಧೆಯಲ್ಲಿ 100 ಮೀಟರ್ ಓಟ, 200 ಮೀಟರ್ ಓಟ, 400 ಮೀಟರ್ ಓಟ, ಗುಂಡೆಸೆತ ಸ್ಪರ್ಧೆಗಳು ನಡೆಯಿತು.