Saturday, September 21, 2024
Saturday, September 21, 2024

ಸಂತ ಸೇವಾಲಾಲರ ಜೀವನಶೈಲಿ ಮತ್ತು ಆದರ್ಶಗಳನ್ನು ಅಳವಡಿಸಿಕೊಳ್ಳಿ

ಸಂತ ಸೇವಾಲಾಲರ ಜೀವನಶೈಲಿ ಮತ್ತು ಆದರ್ಶಗಳನ್ನು ಅಳವಡಿಸಿಕೊಳ್ಳಿ

Date:

ಉಡುಪಿ, ಫೆ. 15: ಸಂತ ಸೇವಾಲಾಲ್ ಅವರ ಜೀವನಶೈಲಿ ಮತ್ತು ಆದರ್ಶಗಳನ್ನು ಕಾರ್ಯಕ್ಷೇತ್ರದಲ್ಲಿ ಅಳವಡಿಸಿಕೊಂಡು ಜನರಿಗೆ ಉತ್ತಮ ಸೇವೆ ನೀಡುವಂತೆ ನಗರಾಭಿವೃದ್ಧಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಮದನ್ ಮೋಹನ್ ಹೇಳಿದರು. ಅವರು ಬುಧವಾರ ನಗರದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಸಂತ ಸೇವಾಲಾಲ್ ಜಯಂತಿ ಕಾರ್ಯಕ್ರಮದಲ್ಲಿ ಸೇವಾಲಾಲರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.

ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಹಿಂದುಳಿದವರು, ಅಲ್ಪಸಂಖ್ಯಾತರು ಮತ್ತು ಸಣ್ಣ ಸಣ್ಣ ಸಮುದಾಯಗಳ ಅಭಿವೃದ್ಧಿ ಹಾಗೂ ಏಳಿಗೆಗೆ ಪ್ರಯತ್ನಿಸಿದವರಲ್ಲಿ ಸೇವಾಲಾಲ್ ಕೂಡ ಒಬ್ಬರು. ಅಂತಹ ಸಮುದಾಯಗಳು ಅವರ ಆದರ್ಶಗಳನ್ನು ಅಳವಡಿಸಿಕೊಂಡು ಬೆಳೆಯಲು ಸೇವಾಲಾಲರೇ ಕಾರಣಕರ್ತರು ಎಂದರು.

ಸಂತ ಸೇವಾಲಾಲ್ ಬಂಜಾರ ಸಂಘದ ಜಿಲ್ಲಾದ್ಯಕ್ಷ ಕುಮಾರ ಕೆ.ಎಂ ಮಾತನಾಡಿ, ಸೇವಾಲಾಲರನ್ನು ಸದ್ಗುರು ಎಂದು ಕರೆಯುತ್ತೇವೆ. ಸದ್ಗುರು ಅಂದರೆ ಸುಳ್ಳನ್ನ ಹೇಳದೆ ಯಾವಾಗಲೂ ಸತ್ಯವನ್ನೆ ನುಡಿಯುವವರು. ಅವರು ಸಮಾಜದಲ್ಲಿನ ಅಂಧಕಾರ ಹೋಗಲಾಡಿಸಲು ಪ್ರಯತ್ನಿಸಿದರು. ಬುಡಕಟ್ಟಿನ ಜನರಲ್ಲಿ ಧೈರ್ಯ ಮತ್ತು ಆತ್ಮಸ್ಥೈರ್ಯವನ್ನು ಮೂಡಿಸಿದ ಮಹಾನ್ ದಾರ್ಶನಿಕ ಎಂದರು.

ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಕಿರಣ್ ಫಡ್ನೇಕರ್, ಜಿಲ್ಲಾ ಬಂಜಾರ ಸಂಘದ ಪದಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ಬಂಜಾರ ಸಂಘದ ಕಾರ‍್ಯದರ್ಶಿ ಮನೋಹರ್ ಲಮಾಣಿ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!