Friday, September 20, 2024
Friday, September 20, 2024

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಉಡುಪಿ: ವಿಜ್ಞಾಪನಾ ಪತ್ರ ಬಿಡುಗಡೆ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಉಡುಪಿ: ವಿಜ್ಞಾಪನಾ ಪತ್ರ ಬಿಡುಗಡೆ

Date:

ಉಡುಪಿ, ಫೆ. 20: ಉಡುಪಿ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಉಡುಪಿ ವಲಯದ ವಿಶೇಷ ಸಭೆ ಉಡುಪಿ ಜಗನ್ನಾಥ ಸಭಾಭವನದಲ್ಲಿ ವಲಯಾಧ್ಯಕ್ಷ ಜನಾರ್ದನ್ ಕೊಡುವೂರು ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ದ.ಕ ಮತ್ತು ಉಡುಪಿ ಜಿಲ್ಲಾಧ್ಯಕ್ಷ ಆನಂದ ಎನ್. ಕುಂಪಲ ಜಿಲ್ಲಾ ಕಟ್ಟಡ ರಚನೆ ಬಗ್ಗೆ ಮಾಹಿತಿ ನೀಡಿ ವಿಜ್ಞಾಪನಾ ಪತ್ರ ಬಿಡುಗಡೆ ಮಾಡಿದರು.

ಸಭೆಯಲ್ಲಿ ಸಲಹಾ ಸಮಿತಿ ಮಾಜಿ ಅಧ್ಯಕ್ಷ ವಿಠಲ ಚೌಟ, ಜಿಲ್ಲಾ ಕೋಶಾಧಿಕಾರಿ ನವೀನ್ ರೈ ಪಂಜಳ, ಪ್ರಧಾನ ಕಾರ್ಯದರ್ಶಿ ನಿತಿನ್ ಬೆಳುವಾಯಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಜಯಕರ ಸಾಲಿಯಾನ್, ಜೊತೆ ಕಾರ್ಯದರ್ಶಿ ಅಜಯ್ ಮಂಗಳೂರು, ವಾಮನ ಪಡುಕೆರೆ, ಪತ್ರಿಕಾ ಪ್ರತಿನಿಧಿ ಉಮೇಶ್, ಮಾಜಿ ಕಾರ್ಯದರ್ಶಿ ಹರೀಶ್ ಅಡ್ಯಾರ್,

ಉಪಾಧ್ಯಕ್ಷ ಪ್ರವೀಣ್ ಹೂಡೆ, ಕಟ್ಟಡ ಸಮಿತಿ ಸದಸ್ಯ ಸುಂದರ ಪೂಜಾರಿ ಕೊಳಲಗಿರಿ, ಉಡುಪಿ ವಲಯದ ಮಾಜಿ ಅಧ್ಯಕ್ಷರುಗಳು, ಸದಸ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ದಿವಾಕರ್ ಹಿರಿಯಡ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು. ವಲಯ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕೊರೆಯ ಸ್ವಾಗತಿಸಿ, ಸುರಭಿ ಸುಧೀರ್ ಶೆಟ್ಟಿ ವಂದಿಸಿದರು. ರಾಘವೇಂದ್ರ ಸೇರಿಗಾರ್ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!