Saturday, September 21, 2024
Saturday, September 21, 2024

ಬೀದಿನಾಟಕದ ಮೂಲಕ ಆರೋಗ್ಯ ಶಿಕ್ಷಣ

ಬೀದಿನಾಟಕದ ಮೂಲಕ ಆರೋಗ್ಯ ಶಿಕ್ಷಣ

Date:

ಉಡುಪಿ, ಮಾ.3: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ.) ಉಡುಪಿ ವತಿಯಿಂದ ಜಿಲ್ಲಾ ಪಂಚಾಯತ್ ಉಡುಪಿ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಹಯೋಗದಲ್ಲಿ ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ ವಿದ್ಯಾರ್ಥಿಗಳಿಂದ ಬೀದಿ ನಾಟಕದ ಮೂಲಕ ಆರೋಗ್ಯ ಶಿಕ್ಷಣ ಅಭಿಯಾನ ಕಾರ್ಯಕ್ರಮವು ಮಾರ್ಚ್ 3 ರಂದು ಮಲ್ಪೆ ಬಸ್ ಸ್ಟ್ಯಾಂಡ್ ವೃತ್ತದ ಬಳಿ ಚಾಲನೆಗೊಂಡಿತು.

ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಗೌರವ ಅಧ್ಯಕ್ಷರಾದ ವಿಶ್ವನಾಥ ಶೆಣೈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಾನಸಿಕ ಖಿನ್ನತೆ, ಆತ್ಮಹತ್ಯೆ ತಡೆ, ಹೆಣ್ಣು ಮಕ್ಕಳ ಆರೋಗ್ಯ ಮತ್ತು ಭ್ರೂಣಹತ್ಯೆ ತಡೆ, ಕ್ಷಯರೋಗದ ಜಾಗೃತಿ, ಉಚಿತ ಮತ್ತು ಕಡ್ಡಾಯ ಶಿಕ್ಷಣ, ಬಾಲಕಾರ್ಮಿಕ ತಡೆ ಇವುಗಳ ಕುರಿತಾದ ಮಾಹಿತಿ ಕಾರ್ಯಕ್ರಮವು ಬೀದಿನಾಟಕದ ಮೂಲಕ ಬಿತ್ತರಿಸಲ್ಪಟ್ಟಿತು.

ಯು.ಪಿ.ಎಂ.ಸಿಯ ವಿದ್ಯಾರ್ಥಿಗಳಾದ ಚಿಣ್ಣಪ್ಪ, ಹಿಮಲ್, ರಕ್ಷಾ ನಾಯಕ್, ಲಕ್ಷ್ಮೀ ಶೆಣೈ, ರಕ್ಷಿತಾ, ಆಶಿಕಾ, ಕಾವ್ಯ ಶೆಟ್ಟಿ, ಜೀವನ್ ಇವರು ಭಾಗವಹಿಸಿದ್ದ ಈ ನಾಟಕವನ್ನು ಕಲಾವಿದ ರಾಮಾಂಜಿ ಇವರು ನಿರ್ದೇಶಿಸಿದ್ದರು. ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸಂಚಾಲಕರಾದ ರವಿರಾಜ್ ಹೆಚ್.ಪಿ., ಸದಸ್ಯರಾದ ನರಸಿಂಹಮೂರ್ತಿ, ಆರೋಗ್ಯ ನಿರೀಕ್ಷಣಾ ಅಧಿಕಾರಿ ಮಂಜುನಾಥ್ ಎನ್., ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿ ನಿಶಾ ವಿ., ಯು.ಪಿ.ಎಂ.ಸಿಯ ವಾಣಿಜ್ಯ ಉಪನ್ಯಾಸಕ ರಾಘವೇಂದ್ರ ಜಿ.ಜಿ., ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು. ಮುಂದಿನ ದಿನಗಳಲ್ಲಿ ಉಡುಪಿ ಜಿಲ್ಲಾದ್ಯಂತ ಈ ಬೀದಿ ನಾಟಕ ಪ್ರದರ್ಶನಗೊಳ್ಳಲಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!