ಕಾರ್ಕಳ, ಮಾ. 7: ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ರ ಸಂಬಂಧಿಸಿಂತೆ, ಕಾರ್ಕಳ ವಿಧಾನಸಭಾ ವ್ಯಾಪ್ತಿಯ, ಮಾದರಿ ನೀತಿ ಸಂಹಿತೆ ತಂಡ, ಸೆಕ್ಟರ್ ಅಧಿಕಾರಿಗಳ ತಂಡ, ಪೊಲೀಸ್ ತಂಡ, ಫ್ಲೈಯಿಂಗ್ ಸ್ಕ್ವಾಡ್ ತಂಡ, ವೀಡಿಯೋ ವೀಕ್ಷಣಾ, ತಂಡಗಳಿಗೆ ನಿಯೋಜಿಸಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ, ಇಂದು ಕಾರ್ಕಳದ ಮಂಜುನಾಥ ಪೈ ಸಭಾಂಗಣದಲ್ಲಿ ನಡೆದ ತರಬೇತಿ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಚುನಾವಣಾ ಕರ್ತವ್ಯ ನಿರ್ವಹಣೆ ಕುರಿತಂತೆ ಅಗತ್ಯ ಸೂಚನೆಗಳನ್ನು ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೆ ಮಚ್ಚಿಂದ್ರ ಹಾಗೂ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿರುವ ವಿವಿಧ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.
ಸ್ಟ್ರಾಂಗ್ ರೂಂ ಪರಿಶೀಲನೆ: ಕಾರ್ಕಳ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಕೇಂದ್ರದ ಸ್ಟ್ರಾಂಗ್ ರೂಂ ಕೊಠಡಿಯಲ್ಲಿ ಕೈಗೊಳ್ಳಬೇಕಾದ, ಅಗತ್ಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಪರಿಶೀಲಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೆ ಮಚ್ಚೀಂದ್ರ ಹಾಗೂ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.