Tuesday, November 26, 2024
Tuesday, November 26, 2024

ಡಾ.ಟಿಎಂಎ ಪೈ ರೋಟರಿ ಆಸ್ಪತ್ರೆ ಕಾರ್ಕಳ: ರೋ ಕೆ. ಕೃಷ್ಣ ಪ್ರಭು ಓಪಿಡಿ ಬ್ಲಾಕ್ ಮತ್ತು ಹೊಸ ಶಸ್ತ್ರಚಿಕಿತ್ಸಾ ಸಂಕೀರ್ಣ ಉದ್ಘಾಟನೆ

ಡಾ.ಟಿಎಂಎ ಪೈ ರೋಟರಿ ಆಸ್ಪತ್ರೆ ಕಾರ್ಕಳ: ರೋ ಕೆ. ಕೃಷ್ಣ ಪ್ರಭು ಓಪಿಡಿ ಬ್ಲಾಕ್ ಮತ್ತು ಹೊಸ ಶಸ್ತ್ರಚಿಕಿತ್ಸಾ ಸಂಕೀರ್ಣ ಉದ್ಘಾಟನೆ

Date:

ಕಾರ್ಕಳ, ಮಾ. 7: ಡಾ. ಟಿ ಎಂ ಎ ಪೈ ರೋಟರಿ ಆಸ್ಪತ್ರೆ ಕಾರ್ಕಳದಲ್ಲಿ ನಿರ್ಮಿಸಿದ ಹೊಸ ರೋ. ಕೆ ಕೃಷ್ಣ ಪ್ರಭು ಓಪಿಡಿ ಬ್ಲಾಕ್ ಮತ್ತು ಹೊಸ ಶಸ್ತ್ರಚಿಕಿತ್ಸಾ ಸಂಕೀರ್ಣದ ಉದ್ಘಾಟನೆಯನ್ನು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ವಿ. ಸುನಿಲ್ ಕುಮಾರ್ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಆರೋಗ್ಯ ಕ್ಷೇತ್ರದಲ್ಲಿ ಕೋವಿಡ್ ಸಮಯ ಸೇರಿದಂತೆ ಮಣಿಪಾಲ ಸಂಸ್ಥೆ ಮಾಡುತ್ತಿರುವ ಕಾರ್ಯವನ್ನು ಶ್ಲಾಘಿಸಿದರು. ಈಗ ಕಾರ್ಕಳದ ಡಾ. ಟಿಎಂಎ ಪೈ ಆಸ್ಪತ್ರೆ ಆಧುನಿಕ ಸೌಅಭ್ಯದೊಂದಿಗೆ ಮೇಲ್ದರ್ಜೆಗೆ ಏರಿಸುತ್ತಿರುವುದರಿಂದ, ಕಾರ್ಕಳದ ಜನತೆಗೆ ಇನ್ನಷ್ಟು ಆರೋಗ್ಯ ಸೇವೆ ಸಿಗುವಂತಾಗಿದೆ ಎಂದರು.

ಲೆಫ್ಟಿನೆಂಟ್ ಜನರಲ್ (ಡಾ) ಎಂ ಡಿ ವೆಂಕಟೇಶ್- ಉಪಕುಲಪತಿಗಳು, ಮಾಹೆ, ಮಣಿಪಾಲ ಮತ್ತು ಡಾ. ಶರತ್ ಕುಮಾರ್ ರಾವ್, ಸಹ – ಉಪ ಕುಲಪತಿಗಳು -ಆರೋಗ್ಯ ವಿಜ್ಞಾನ, ಮಾಹೆ ಮಣಿಪಾಲ ಅವರುಗಳು ಗೌರವ ಅಥಿತಿಗಳಾಗಿದ್ದರು. ಡಾ. ಎಚ್.ಎಸ್. ಬಲ್ಲಾಳ್-ಸಹ ಕುಲಾಧಿಪತಿಗಳು,ಮಾಹೆ, ಮಣಿಪಾಲ ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಲೆಫ್ಟಿನೆಂಟ್ ಜನರಲ್ (ಡಾ) ಎಂ ಡಿ ವೆಂಕಟೇಶ್ ಅವರು, ಈಗ ಈ ಸುಧಾರಿತ ಸೌಲಭ್ಯವನ್ನು ಆರಂಭಿಸಿರುವುದರಿಂದ ಕಾರ್ಕಳದ ಟಿಎಂಎ ಪೈ ಆಸ್ಪತ್ರೆ ಸಂಪೂರ್ಣವಾಗಿ ದ್ವಿತೀಯ ಆರೋಗ್ಯ ಕೇಂದ್ರ ಮಟ್ಟಕೆ ಏರಿಸಿದಂತಾಗಿದೆ. ಶೀಘ್ರದಲ್ಲೇ 24*7 ಅಪಘಾತ ಮತ್ತು ತುರ್ತು ಚಿಕಿತ್ಸಾ ವಿಭಾಗ, ಸಿಟಿ ಸ್ಕ್ಯಾನ್ ಸೇರಿದಂತೆ ಇನ್ನಷ್ಟು ಸೌಲಭ್ಯವನ್ನು ಇಲ್ಲಿ ಆರಂಭಿಸಲಾಗುವುದು ಎಂದರು. ಆದ್ದರಿಂದ ಈಗ, ರೋಗಿಯು ದ್ವಿತೀಯ ಮಟ್ಟದ ಚಿಕಿತ್ಸೆಗಾಗಿ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ಬರುವ ಅಗತ್ಯವಿಲ್ಲ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಡಾ. ಶರತ್ ಕುಮಾರ್ ರಾವ್ ಅವರು, ಡಾ. ಟಿಎಂಎ ಪೈ ಆಸ್ಪತ್ರೆಯು ಆರಂಭದಿಂದ ಇಲ್ಲಿಯವರೆಗೆ ಬೆಳೆದು ಬಂದ ದಿನಗಳನ್ನು ಮತ್ತು ರೋಟರಿ ಸಂಸ್ಥೆಯ ಸಹಕಾರವನ್ನು ನೆನಪಿಸಿದರು. ತನ್ನ ಅಧ್ಯಕ್ಷೀಯ ಭಾಷಣದಲ್ಲಿ ಡಾ. ಎಚ್.ಎಸ್. ಬಲ್ಲಾಳ್ ಅವರು, ಡಾ. ಟಿಎಂಎ ಪೈ ಆಸ್ಪತ್ರೆ ಕಾರ್ಕಳ ಆರಂಭಕ್ಕೆ ಕಾರಣವಾದ ದಿನಗಳನ್ನು ನೆನಪಿಸಿಕೊಂಡರು ಮತ್ತು ಕಾರ್ಕಳದ ರೋಟರಿ ಸಂಸ್ಥೆಗೆ ಅಭಿನಂದನೆ ಸಲ್ಲಿಸಿದರು. ಇನ್ನು ಮುಂದೆಯೂ ಈ ಆಸ್ಪತ್ರೆಗೆ ಇನ್ನಷ್ಟು ಅಭಿವೃದ್ಧಿ ಕ್ರಮಗಳನ್ನು ಕೈಗೊಳ್ಳುವುದರ ಮೂಲಕ ಕಾರ್ಕಳದ ಜನತೆಗೆ ಸುಧಾರಿತ ಚಿಕಿತ್ಸೆ ನೀಡಲು ಮಾಹೆ ಮಣಿಪಾಲವು ಬದ್ಧವಾಗಿದೆ ಎಂದರು.

ಡಾ. ಟಿಎಂಎ ಪೈ ರೋಟರಿ ಆಸ್ಪತ್ರೆ ಕಾರ್ಕಳದ ಮುಖ್ಯ ವೈದ್ಯಾಧಿಕಾರಿ ಡಾ. ಕೀರ್ತಿನಾಥ ಬಲ್ಲಾಳ ಸ್ವಾಗತಿಸಿ, ಡಾ. ಸಂಜಯ್ ಕುಮಾರ್ ವಂದಿಸಿದರು. ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಡೀನ್ ಡಾ. ಪದ್ಮರಾಜ್ ಹೆಗ್ಡೆ,ಮಾಹೆ ಮಣಿಪಾಲದ ಬೋಧನಾ ಆಸ್ಪತ್ರೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ವೇಣುಗೋಪಾಲ್, ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ, ಮಾಹೆ ಮಣಿಪಾಲದ ಹಿರಿಯ ಅಧಿಕಾರಿಗಳು, ರೋಟರಿ ಗಣ್ಯರು ಹಾಗೂ ಹಿರಿಯ ವೈದ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!