ಬ್ರಹ್ಮಾವರ, ಮಾ. 22: ಹಾರಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಲವಾರು ವರ್ಷಗಳಿಂದ ವಾಸವಾಗಿರುವ 35 ಕುಟುಂಬಗಳಿಗೆ 94/ಸಿ ಹಾಗೂ 94/ ಸಿಸಿ ಅಡಿಯಲ್ಲಿ ಖಾಯಂ ನಿವೇಶನ ಹಕ್ಕುಪತ್ರವನ್ನು ವಿತರಿಸುವ ಕಾರ್ಯಕ್ರಮ ಅಬ್ಬಗ ದಾರಗ ಸಭಾಭವನದಲ್ಲಿ ನಡೆಯಿತು.
ಹಾರಾಡಿ ಗ್ರಾಮದಲ್ಲಿ ಹಲವಾರು ವರ್ಷಗಳಿಂದ ವಾಸವಾಗಿರು ಈ ಕುಟುಂಬಗಳಿಗೆ ಡೀಮ್ಡ್ ಫಾರೆಸ್ಟ್ ಸಮಸ್ಯೆಯಿಂದಾಗಿ ಹಕ್ಕುಪತ್ರ ನೀಡಲು ಸಮಸ್ಯೆ ಉಂಟಾಗಿರುತ್ತದೆ. ವಿಶೇಷ ಪ್ರಕರಣಗಳ ಅಡಿ ಡೀಮ್ಡ್ ವಿರಹಿತಗೊಳಿಸಿ 94/C ಹಾಗೂ 94/CC ಅಡಿಯಲ್ಲಿ ಖಾಯಂ ನಿವೇಶನ ಹಕ್ಕುಪತ್ರವನ್ನು ವಿತರಿಸಲಾಗಿದೆ ಎಂದು ಶಾಸಕ ಕೆ. ರಘುಪತಿ ಭಟ್ ಹಕ್ಕು ಪತ್ರಗಳನ್ನು ವಿತರಿಸಿ ಮಾತನಾಡಿದರು.
ಹಾರಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಭಾಕರ್ ಶೆಟ್ಟಿ, ಬ್ರಹ್ಮಾವರ ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ವಸಂತಿ ಬೈಕಾಡಿ, ಗ್ರಾಮ ಲೆಕ್ಕಾಧಿಕಾರಿ ಚಂದ್ರ ಹಾಗೂ ಹಾರಾಡಿ ಗ್ರಾಮ ಪಂಚಾಯತ್ ಸದಸ್ಯರು, ಉಪಸ್ಥಿತರಿದ್ದರು.