ಬೆಂಗಳೂರು, ಮಾ. 23: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಘೋಷಣೆಗೆ ದಿನಗಣನೆ ಆರಂಭವಾಗಿದೆ. ಮುಖ್ಯ ಚುನಾವಣಾಧಿಕಾರಿಗಳು ವಿವಿಧ ಜಿಲ್ಲೆಗಳ ಚುನಾವಣಾಧಿಕಾರಿಗಳ ಜೊತೆ ಮಂಗಳವಾರ ಮಹತ್ವದ ಸಭೆ ನಡೆಸಿ ನೀತಿ ಸಂಹಿತೆ ಜಾರಿಗೆ ಸಂಬಂಧಿಸಿದಂತೆ ಎಲ್ಲಾ ರೀತಿಯ ಸಿದ್ಧತೆಗಳನ್ನು ನಡೆಸುವಂತೆ ಸೂಚನೆ ನೀಡಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಅಳವಡಿಸಲಾದ ಫ್ಲೆಕ್ಸ್, ಕಟೌಟ್, ಬ್ಯಾನರ್ ಗಳನ್ನು ಮಾರ್ಚ್ 24 ರೊಳಗೆ ತೆರವುಗೊಳಿಸುವಂತೆ ಸಭೆಯಲ್ಲಿ ಸೂಚನೆ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 25 ರಂದು ರಾಜ್ಯಕ್ಕೆ ಆಗಮಿಸಿ ಸರಣಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ಮಾರ್ಚ್ 25ರ ಸಂಜೆ ಅಥವಾ ಮಾರ್ಚ್ 26 ರಂದು ಚುನಾವಣೆ ದಿನಾಂಕ ಘೋಷಣೆಯಾಗುವ ಎಲ್ಲಾ ಸಾಧ್ಯತೆಗಳಿವೆ.