Tuesday, November 26, 2024
Tuesday, November 26, 2024

ರಾಹುಲ್ ಗಾಂಧಿ ಬಾಲಿಶ ಹೇಳಿಕೆಗಳಿಗೆ ತಕ್ಕ ಶಾಸ್ತಿ: ಯಶ್ಪಾಲ್ ಸುವರ್ಣ

ರಾಹುಲ್ ಗಾಂಧಿ ಬಾಲಿಶ ಹೇಳಿಕೆಗಳಿಗೆ ತಕ್ಕ ಶಾಸ್ತಿ: ಯಶ್ಪಾಲ್ ಸುವರ್ಣ

Date:

ಉಡುಪಿ, ಮಾ. 24: 2019 ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಮೋದಿ ಉಪನಾಮ ಇರುವವರೆಲ್ಲ ಕಳ್ಳರು ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಸೂರತ್ ನ್ಯಾಯಾಲಯ 2 ವರ್ಷಗಳ ಶಿಕ್ಷೆ ವಿಧಿಸುವ ಮೂಲಕ ರಾಹುಲ್ ಗಾಂಧಿಯ ಅಪ್ರಬುದ್ಧ ಬಾಲಿಶ ಹೇಳಿಕೆ ಮತ್ತು ಹಿಂದುಳಿದ ವರ್ಗಗಳ ನಾಯಕರನ್ನು ತೆಗಳುವ ನಿಲುವಿಗೆ ತಕ್ಕ ಶಾಸ್ತಿ ಮಾಡಿದೆ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಸುವರ್ಣ ತಿಳಿಸಿದ್ದಾರೆ.

ಕಳೆದ 65 ವರ್ಷಗಳಿಂದ ಕಾಂಗ್ರೆಸ್ ಪಕ್ಷ ಹಿಂದುಳಿದ ವರ್ಗ ಮತ್ತು ದಲಿತರನ್ನು ಸಮಾಜದ ಮುಖ್ಯವಾಹಿನಿಗೆ ಬರಲು ಅವಕಾಶ ನೀಡದೆ ನಿರಂತರವಾಗಿ ಸುಳ್ಳು ಭರವಸೆಗಳನ್ನು ನೀಡಿ ಓಟ್ ಬ್ಯಾಂಕ್ ರಾಜಕಾರಣ ನಡೆಸುತ್ತಿದೆ. ಇದೀಗ ಹಿಂದುಳಿದ ವರ್ಗ ಮತ್ತು ದಲಿತರು ನರೇಂದ್ರ ಮೋದಿಯವರ ನಾಯಕತ್ವಕ್ಕೆ ಶಕ್ತಿ ತುಂಬುವ ನಿಟ್ಟಿನಲ್ಲಿ ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡುತ್ತಿರುವುದರಿಂದ ಹತಾಶೆಗೊಂಡ ಕಾಂಗ್ರೆಸ್ ಪ್ರಧಾನಿ ಮೋದಿ ಸಹಿತ ಹಿಂದುಳಿದ ವರ್ಗದವರನ್ನು ಕಳ್ಳನಿಗೆ ಹೋಲಿಕೆ ಮಾಡುವ ಮೂಲಕ ಹಿಂದುಳಿದ ವರ್ಗಗಳ ಬಗ್ಗೆ ರಾಹುಲ್ ತನಗಿರುವ ಧೋರಣೆಯನ್ನು ಪ್ರದರ್ಶಿಸಿದ್ದಾರೆ.

ರಾಹುಲ್ ಗಾಂಧಿ ಅನರ್ಹತೆಯ ಮೂಲಕ ಕಾಂಗ್ರೆಸ್ ಪಕ್ಷ ದೇಶದ ಜನತೆ ಹಾಗೂ ಪ್ರಜಾಪ್ರಭುತ್ವಕ್ಕೆ ಮಾಡಿದ ಅಪಮಾನಕ್ಕೆ ತಕ್ಕ ಶಾಸ್ತಿಯಾಗಿದ್ದು, ಹತಾಶ ಸ್ಥಿತಿಯಲ್ಲಿ ದೇಶದಾದ್ಯಂತ ನೆಲೆ ಕಳೆದುಕೊಂಡಿರುವ ಕಾಂಗ್ರೆಸ್ ಪಕ್ಷಕ್ಕೆ ಮುಂದಿನ ಚುನಾವಣೆಯಲ್ಲಿ ಕರ್ನಾಟಕದ ಜನತೆ ಮತ್ತೊಮ್ಮೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಯಶ್ಪಾಲ್ ಸುವರ್ಣ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!