Tuesday, November 26, 2024
Tuesday, November 26, 2024

ಕಾಯಕ ಶುದ್ದಿಯಿಂದ ಆತ್ಮಶುದ್ದಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಕಾಯಕ ಶುದ್ದಿಯಿಂದ ಆತ್ಮಶುದ್ದಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

Date:

ಉಡುಪಿ, ಮಾ. 26: ವ್ಯಕ್ತಿಗಳು ತಾವು ಮಾಡುವ ಕಾಯಕವನ್ನು ಶ್ರದ್ದೆ ಮತ್ತು ಭಕ್ತಿಯಿಂಧ ಮಾಡುವುದರ ಮೂಲಕ ಮನಸ್ಸು ಮತ್ತು ಆತ್ಮವನ್ನು ಶುದ್ದಿ ಮಾಡಿಕೊಳ್ಳಬಹುದು ಎಂಬ ದೇವರ ದಾಸಿಮಯ್ಯ ಸಂದೇಶ ಎಲ್ಲ ಕಾಲಕ್ಕೂ ಸಲ್ಲುತ್ತದೆ ಎಂದು ಜಿಲ್ಲಾಧಿಕಾರಿ ಕೂರ್ಮರಾವ್ ಎಂ ಹೇಳಿದರು. ಅವರು ಭಾನುವಾರ ರಜತಾದ್ರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ , ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ವತಿಯಿಂದ ನಡೆದ, ಶ್ರೀ ದೇವರ ದಾಸಿಮಯ್ಯ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪ್ರತಿಯೊಬ್ಬರೂ ತಾವು ಮಾಡುವ ಕೆಲಸವನ್ನು ಶ್ರದ್ದೆ ಮತ್ತು ಭಕ್ತಿಯಿಂದ ಮಾಡುವುದರ ಮೂಲಕ ಅಭಿವೃಧ್ದಿ ಹೊಂದುವುದರ ಜೊತೆಗೆ ನೆಮ್ಮದಿಯ ಜೀವನ ಸಾಗಿಸಬಹುದು, ಈ ನಿಟ್ಟಿನಲ್ಲಿ ದೇವರ ದಾಸಿಮಯ್ಯ ಅವರು ಕಾಯಕ ಶ್ರದ್ದೆ ಮತ್ತು ವಚನಗಳ ಮೂಲಕ ನೀಡಿರುವ ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು, ದೈನಂದಿನ ಬದುಕಿನಲ್ಲಿ ಅದರಂತೆ ನಡೆಯಬೇಕು ಎಂದರು. ದೇವರ ದಾಸಿಮಯ್ಯ ಕುರಿತು ಉಪನ್ಯಾಸ ನೀಡಿದ ಗಿರೀಶ್ ಶೆಟ್ಟಿಗಾರ್ ಮಾತನಾಡಿ, ಆದ್ಯ ವಚನಕಾರರೆಂದು ಕರೆಯುವ ದೇವರ ದಾಸಿಮಯ್ಯ ಅವರು, ಸಮಾಜದಲ್ಲಿನ ಮೂಡನಂಬಿಕೆಗಳು ಮತ್ತು ಜನರಲ್ಲಿನ ಅಜ್ಞಾನವನ್ನು ತೊಡೆದುಹಾಕಲು ಪ್ರಯತ್ನಿಸಿದ್ದರು. ವiನುಷ್ಯ ಜೀವನದಲ್ಲಿ ಬರುವ ಯಾವುದೇ ಅಡೆ ತಡೆಗಳಿಗೆ ಎದೆಗುಂದದೆ ಶಾಂತಚಿತ್ತದಿಂದ ದೃಡವಾಗಿ ಅವುಗಳನ್ನು ಎದುರಿಸಿದರೆ ಜೀವನ ಸುಗಮವಾಗಲಿದೆ, ಮನಃಶುದ್ದಿಯಿಂದ ತಮಗೆ ಬಂದಿರುವ ಕಾಯಕವನ್ನು ಮಾಡಿದರೆ ದೇವರು ಒಲಿಯುತ್ತಾನೆ ಎಂದು ತಿಳಿಸಿದ್ದು, ರಾಮನಾಥ ಎಂಬ ಅಂಕಿತನಾಮದಿಂದ ಸುಮಾರು 150 ಕ್ಕೂ ಅಧಿಕ ವಚನಗಳನ್ನು ರಚಿಸಿದ್ದಾರೆ ಎಂದರು.

ಸಭೆಯಲ್ಲಿ ತರಬೇತಿ ನಿರತ ಐ.ಎ.ಎಸ್ ಅಧಿಕಾರಿ ಯತೀಶ್, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್, ಜಿಲ್ಲಾ ಜವಳಿ ಮತ್ತು ಕೈಮಗ್ಗ ಇಲಾಖೆಯ ಸಹಾಯಕ ನಿರ್ದೇಶಕ ಶಿವಶಂಕರ್, ದಕ್ಷಿಣ ಕನ್ನಡ ಪದ್ಮಶಾಲಿ ಸಂಘದ ಅಧ್ಯಕ್ಷ ರಾಮದಾಸ ಶೆಟ್ಟಿಗಾರ್, ವಿದ್ಯಾವರ್ಧಕ ಸಂಘದ ಅಧ್ಯಕ್ಷ ಲಕ್ಷ್ಮಣ ಕೊಡಿಯಾಲಬೈಲು, ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ನಾಮ ನಿರ್ದೇಶಿತ ಸದಸ್ಯ ಮಾದವ ಶೆಟ್ಟಿಗಾರ್ ಕೆರೆಕಾಡು, ಉಡುಪಿ ಪ್ರಾಥಮಿಕ ನೇಕಾರರ ಸಹಕಾರ ಸಂಘದ ಅಧ್ಯಕ್ಷ ರತ್ನಾಕರ ಇಂದ್ರಾಳಿ ಮತ್ತಿತರರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿದರು. ನಮ್ಮ ಭೂಮಿಯ ರಾಮಾಂಜಿ ವಂದಿಸಿ, ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!