ಹೂಗ್ಲಿ, ಏ.2: ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ಭಾನುವಾರ ಬಿಜೆಪಿ ಶೋಭಯಾತ್ರೆಯ ಸಂದರ್ಭದಲ್ಲಿ ಕಿಡಿಗೇಡಿಗಳು ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆಸಿ ಗಲಭೆ ಸೃಷ್ಟಿಸಿದ ಘಟನೆ ನಡೆದಿದೆ. ಹೌರಾದಲ್ಲಿ ರಾಮನವಮಿ ಮೆರವಣಿಗೆ ಸಂದರ್ಭದಲ್ಲಿ ಘರ್ಷಣೆ ನಡೆದು ಕೆಲವು ದಿನಗಳಲ್ಲಿಯೇ ಹೂಗ್ಲಿಯಲ್ಲಿ ಹಿಂಸಾಚಾರ ನಡೆದಿದೆ. ಶೋಭಾಯಾತ್ರೆಯಲ್ಲಿ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ದಿಲೀಪ್ ಘೋಷ್ ಭಾಗವಹಿಸಿದ್ದರು.
ರಾಮನವಮಿ ಮೆರವಣಿಗೆಯ ಮೇಲೆ ಕಲ್ಲು ತೂರಾಟಕ್ಕೆ ಸಂಬಂಧಿಸಿದಂತೆ 36 ಮಂದಿಯನ್ನು ಬಂಧಿಸಲಾಗಿತ್ತು. ಪೊಲೀಸ್ ವಾಹನಗಳಿಗೂ ಗಲಭೆಕೋರರು ಬೆಂಕಿ ಹಚ್ಚಿ ಸುತ್ತಮುತ್ತಲಿನ ಅಂಗಡಿಗಳ ಮೇಲೆಯೂ ಕಲ್ಲು ತೂರಾಟ ನಡೆಸಿದ್ದರು. ಘಟನೆಯನ್ನು ಬಿಜೆಪಿ ರಾಜ್ಯ ಘಟಕ ಘಂಡಿಸಿದೆ.
ಪ್ರಜಾಪ್ರಭುತ್ವದ ಹಳಿ ತಪ್ಪಿಸಲು ಬಿಡುವುದಿಲ್ಲ: ಪಶ್ಚಿಮ ಬಂಗಾಳ ರಾಜ್ಯಪಾಲ
ಗೂಂಡಾಗಳನ್ನು ಕಬ್ಬಿಣದ ಕೈಯಿಂದ ಹತ್ತಿಕ್ಕುತ್ತೇವೆ. ಪ್ರಜಾಪ್ರಭುತ್ವದ ಹಳಿ ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ಇಂತಹ ಘಟನೆಗಳಿಗೆ ಪೂರ್ಣವಿರಾಮ ಹಾಕಲು ರಾಜ್ಯವು ನಿರ್ಧರಿಸಿದೆ ಎಂದು ಪಶ್ಚಿಮ ಬಂಗಾಳ ರಾಜ್ಯಪಾಲ ಸಿ.ವಿ.ಆನಂದ ಬೋಸ್ ಹೇಳಿದ್ದಾರೆ.