ನವದೆಹಲಿ, ಏ. 4: ದೇಶಾದ್ಯಂತ ಮತ್ತೊಮ್ಮೆ ಕೋವಿಡ್ ಸದ್ದು ಮಾಡುತ್ತಿರುವ ಬೆನ್ನಲ್ಲೇ ತಜ್ಞ ವೈದ್ಯರು ಸಲಹೆಯೊಂದನ್ನು ನೀಡಿದ್ದಾರೆ. ಪ್ರಸ್ತುತ ಹವಾಮಾನವು ಕೊರೊನಾ ಸೋಂಕು ಹರಡಲು ಅನುಕೂಲಕರವಾಗಿರುವುದರಿಂದ ಅಗತ್ಯ ಮುನ್ನೆಚ್ಚರಿಕೆಗಳನ್ನು ಕೈಗೊಳ್ಳಿ ಎಂದು ಹೇಳಿದ್ದಾರೆ.
ಕೋವಿಡ್ ರೋಗಲಕ್ಷಣಗಳನ್ನು ನಿರ್ಲಕ್ಷಿಸಬೇಡಿ ಎಂಬ ಸಲಹೆಯನ್ನೂ ವೈದ್ಯರು ನೀಡಿದ್ದಾರೆ. ಕಳೆದ ವಾರದಿಂದ ಕೋವಿಡ್ ಪ್ರಕರಣಗಳಲ್ಲಿ ಏರಿಕೆ ಕಂಡುಬರುತ್ತಿದೆ. ದೇಶಾದ್ಯಂತ ಪ್ರತಿದಿನ ಸುಮಾರು 3,000 ಪಾಸಿಟಿವ್ ಪ್ರಕರಣಗಳು ವರದಿಯಾಗುತ್ತಿವೆ.
ಏಪ್ರಿಲ್ 4 ರಂದು ದೇಶಾದ್ಯಂತ 3,637 ಪಾಸಿಟಿವ್ ಪ್ರಕರಣಗಳು ಕಂಡುಬಂದಿದ್ದು, 7 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ದೇಶಾದ್ಯಂತ 1,800 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 20,219 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.