ಉಡುಪಿ, ಏ. 4: 18 ವರ್ಷ ತುಂಬಿದವರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ವೋಟರ್ ಹೆಲ್ಪ್ ಲೈನ್ ಆಪ್ ಮೂಲಕ ಆನ್ ಲೈನ್ ನೋಂದಣಿ ಮಾಡಿಕೊಳ್ಳಬಹುದು.
ಬೂತ್ ಮಟ್ಟದ ಅಧಿಕಾರಿ ಅಥವಾ ಮತದಾರರ ಸಹಾಯ ಕೇಂದ್ರ, ಸಹಾಯವಾಣಿ 1950 ಸಂಖ್ಯೆಯನ್ನೂ ಸಂಪರ್ಕಿಸಬಹುದು. ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಏಪ್ರಿಲ್ 11ರ ಮಂಗಳವಾರ ಕೊನೆಯ ದಿನ.