Sunday, November 24, 2024
Sunday, November 24, 2024

ಮಹಾವೀರ ಜಯಂತಿ ಆಚರಣೆ

ಮಹಾವೀರ ಜಯಂತಿ ಆಚರಣೆ

Date:

ಉಡುಪಿ, ಏ. 5: ಪ್ರಕೃತಿ ಸಕಲ ಜೀವಿಗಳಿಗೂ ಬದುಕು ಹಕ್ಕನ್ನು ನೀಡಿದೆ. ನಾವು ನಮ್ಮ ಜೀವನದಲ್ಲಿ ಮಹಾವೀರರ ಐದು ಪಂಚ ತತ್ವಗಳಾದ ಸತ್ಯ, ಅಹಿಂಸೆ, ಅಪರಿಗ್ರಹ, ಆಚೌರ್ಯ ಮತ್ತು ಬ್ರಹ್ಮಚರ್ಯ ಪಾಲಿಸಿದಾಗ ಪ್ರಕೃತಿಗೆ ಪೂರಕವಾದ ಮಾನವ ಧರ್ಮ ಸಮಾಜದಲ್ಲಿ ನೆಲೆಗೊಳ್ಳುತ್ತದೆ ಎಂದು ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್ ರವರು ಹೇಳಿದರು. ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶ್ರೀ ಭಗವಾನ್ ಮಹಾವೀರರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡಿದರು.

ಭಗವಾನ್ ಮಹಾವೀರರು ಶಾಂತಿ ಸೌಹಾರ್ದತೆಯನ್ನು ಬೋಧಿಸುವ ಮೂಲಕ ಮಾನವನ ಜೀವನ ಮೌಲ್ಯಗಳು ಸುಧಾರಿಸಲು ಮಾರ್ಗದರ್ಶನವನ್ನು ನೀಡಿದ್ದಾರೆ. ಅವುಗಳನ್ನು ಎಲ್ಲರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೆಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಜೈನ ಮಿಲನ್ ನ ವಿನೋದ ಪ್ರಸನ್ನ ಕುಮಾರ್ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷರಾದ ಸುರೇಂದ್ರ ಅಡಿಗ ಮಹಾವೀರರ ಕುರಿತು ಮಾತನಾಡಿದರು.

ಜೈನ ಮಿಲನ್ ಅಧ್ಯಕ್ಷರಾದ ದೀಪ ರಾಜೇಶ್, ಸುಧೀರ್ ಜೈನ್, ಕನ್ನಡ ಸಾಹಿತ್ಯ ಪರಿಷತ್ ನ ರವಿರಾಜ್, ನರಸಿಂಹಮೂರ್ತಿ, ಜಿಲ್ಲಾ ಕಾರ್ಮಿಕಾಧಿಕಾರಿ ಕುಮಾರ್, ಸಮುದಾಯದ ಸದಸ್ಯರು ಹಾಗೂ ಜಿಲ್ಲಾಡಳಿತದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ಜೈನ್ ಮಿಲನ್ ನ ಪ್ರಸನ್ನ ಕುಮಾರ್ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನ.28: ನರೇಂದ್ರ ಎಸ್ ಗಂಗೊಳ್ಳಿ ಅವರ ‘ನಿಭೃತ’ ಪತ್ತೇದಾರಿ ಕಾದಂಬರಿ ಬಿಡುಗಡೆ

ಉಡುಪಿ, ನ.23: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು...

ವಯನಾಡ್: ಪ್ರಿಯಾಂಕಾ ಗಾಂಧಿಗೆ ಐತಿಹಾಸಿಕ ಗೆಲುವು

ವಯನಾಡ್, ನ.23: ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ನಾಯಕಿ...

ಉಪಚುನಾವಣೆಯಲ್ಲಿ ಕಾಂಗ್ರೆಸ್ ಕ್ಲೀನ್ ಸ್ವೀಪ್- ನಮ್ಮ ಕಾರ್ಯಕರ್ತರ ಅವಿರತ ಶ್ರಮದ ಗೆಲುವು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ನ.23: ಕರ್ನಾಟಕದಲ್ಲಿ ನಡೆದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್...

ಮಹಾರಾಷ್ಟ್ರದ ಗೆಲುವು ಅಭಿವೃದ್ಧಿ ಮತ್ತು ಉತ್ತಮ ಆಡಳಿತದ ಗೆಲುವು: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ನ.23: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಗೆಲುವು ಉತ್ತಮ...
error: Content is protected !!