Monday, November 25, 2024
Monday, November 25, 2024

ಚುನಾವಣಾ ಅಕ್ರಮಗಳ ವಿರುದ್ದ ಸಿ ವಿಜಿಲ್ ಹದ್ದಿನ ಕಣ್ಣು

ಚುನಾವಣಾ ಅಕ್ರಮಗಳ ವಿರುದ್ದ ಸಿ ವಿಜಿಲ್ ಹದ್ದಿನ ಕಣ್ಣು

Date:

ಉಡುಪಿ, ಏ. 7: ಮುಕ್ತ, ಪಾರದರ್ಶಕ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುವುದು ಚುನಾವಣಾ ಆಯೋಗದ ಮುಖ್ಯ ಉದ್ದೇಶವಾಗಿದ್ದು, ಈ ಉದ್ದೇಶ ಈಡೇರಿಕೆಗೆ ಚುನಾವಣಾ ಸಮಯದಲ್ಲಿ ನಡೆಯುವ ಹಲವು ಅಕ್ರಮಗಳು ಅಡ್ಡಿಯಾಗಲಿದ್ದು, ಇಂತಹ ಅಕ್ರಮಗಳನ್ನು ತಡೆಯಲು ಹಾಗೂ ಇವುಗಳ ವಿರುದ್ದ ತ್ವರಿತಗತಿಯಲ್ಲಿ, ಕಾಲಮಿತಿಯೊಳಗೆ ಕ್ರಮ ಕೈಗೊಳ್ಳಲು ಸೀ ವಿಜಲ್ ಆಪ್ ನ್ನು ಚುನಾವಣಾ ಆಯೋಗ ಬಿಡುಗಡೆ ಮಾಡಿದೆ.

ಚುನಾವಣಾ ಸಮಯದಲ್ಲಿ ಮತದಾರರಿಗೆ ನಿರ್ದಿಷ್ಟ ವ್ಯಕ್ತಿ ಅಥವಾ ಪಕ್ಷಕ್ಕೆ ಮತ ಹಾಕುವಂತೆ ವಿವಿಧ ರೀತಿಯ ಅಮಿಷ ನೀಡಬಹುದಾದ, ಹಣ ವಿತರಣೆ, ಉಡುಗೊರೆಗಳು ಹಾಗೂ ಕೂಪನ್ ವಿತರಣೆ, ಮದ್ಯ ವಿತರಣೆ, ಅನುಮತಿಯಿಲ್ಲದ ಪೋಸ್ಟರ್ ಗಳು ಮತ್ತು ಬ್ಯಾನರ್ ಗಳು, ಬಂದೂಕುಗಳ ಪ್ರದರ್ಶನ ಹಾಗೂ ಬೆದರಿಕೆ, ಆಸ್ತಿ ವಿರೂಪ, ಧಾರ್ಮಿಕ ಅಥವಾ ಕೋಮು ಭಾಷಣಗಳು/ಸಂದೇಶಗಳು, ಮತಗಟ್ಟೆಯ 200 ಮೀ ಪ್ರದೇಶದಲ್ಲಿ ಪ್ರಚಾರ, ನಿಷೇಧದ ಅವಧಿಯಲ್ಲಿ ಪ್ರಚಾರ, ಮತದಾನ ದಿನದಂದು ವಾಹನಗಳಲ್ಲಿ ಮತದಾರರ ಸಾಗಣೆ ಮುಂತಾದ ಯಾವುದೇ ರೀತಿಯ ಪ್ರಲೋಭನೆ ಹಾಗೂ ಬೆದರಿಕೆ ಹಾಗೂ ಮಾದರಿ ನೀತಿ ಸಂಹಿತೆ ಪ್ರಕರಣಗಳು ಕಂಡುಬಂದಲ್ಲಿ ಸಾರ್ವಜನಿಕರೇ ನೇರವಾಗಿ ಸಿ ವಿಜಿಲ್ ಆಪ್ ನಲ್ಲಿ ಅದರ ಬಗ್ಗೆ ದೂರು ದಾಖಲು ಮಾಡಬಹುದಾಗಿದೆ.

ಸಿ ವಿಜಲ್ ಮೂಲಕ ಸಲ್ಲಿಸುವ ದೂರುಗಳು ಸ್ವಯಂ ಸ್ಥಳವನ್ನು ತೋರಿಸುವ ಸೌಲಭ್ಯದೊಂದಿಗೆ ಪ್ರಕರಣ ನಡೆದ ನಿರ್ದಿಷ್ಟ ಸ್ಥಳ ಮತ್ತು ಸಮಯದಲ್ಲಿ ಮಾಹಿತಿಯನ್ನು ಸ್ಪಷ್ಟವಾಗಿ ತಿಳಿಸಲಿದೆ. ಸಾರ್ವಜನಿಕರು ಆಂಡ್ರಾಯ್ಡ್ ಮೊಬೈಲ್ ನಲ್ಲಿ ಪ್ಲೇ ಸ್ಟೋರ್ ನಲ್ಲಿ ಸಿ ವಿಜಿಲ್ ಅಪ್ ನ್ನು ಡೌನ್ ಲೋಡ್ ಮಾಡಿಕೊಂಡು ಅತ್ಯಂತ ಸುಲಭ ರೀತಿಯಲ್ಲಿ ಇದನ್ನು ಬಳಸಬಹುದಾಗಿದ್ದು, ಅಕ್ರಮದ ಕುರಿತ ಛಾಯಾಚಿತ್ರ ಹಾಗೂ ವೀಡಿಯೋಗಳನ್ನು ಸಲ್ಲಿಸಬಹುದಾಗಿದೆ. ದೂರು ನೀಡುವ ಸಾರ್ವಜನಿಕರ ಹೆಸರುಗಳನ್ನು ಗೌಪ್ಯವಾಗಿಡಲಾಗುವುದು.

ಸಿ ವಿಜಿಲ್ ನಲ್ಲಿ ದಾಖಲಾಗುವ ದೂರುಗಳನ್ನು ನಿರ್ವಹಿಸಲು ಉಡುಪಿ ಜಿಲ್ಲಾಧಿಕಾರಿ ಕಚೇರಿ ಸೇರಿದಂತೆ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಪ್ರತ್ಯೇಕ ಸಿಬ್ಬಂದಿಗಳನ್ನು ನಿಯೋಜಿಸಿದ್ದು, ಅವರು ಮತದಾನ ಮುಕ್ತಾಯವಾಗುವರೆಗೂ 3 ಪಾಳಿಯಲ್ಲಿ 24*7 ಕಾರ್ಯನಿರ್ವಹಿಸುತ್ತಿದ್ದಾರೆ. ದೂರುಗಳು ಬಂದ ಕೂಡಲೇ ಅವುಗಳನ್ನು ಪರಿಶೀಲಿಸಿ, ಸದ್ರಿ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿರುವ ವ್ಯಾಪ್ತಿಯ ಫ್ಲೈಯಿಂಗ್ ಸ್ಕ್ವಾಡ್ ಗಳ ತಂಡಕ್ಕೆ ಪ್ರಕರಣದ ಸಂಪೂರ್ಣ ವಿವರಗಳ ಮಾಹಿತಿ ನೀಡಲಾಗುವುದು.

ಸದ್ರಿ ಮಾಹಿತಿಯ ಆಧಾರದಲ್ಲಿ ಸ್ಥಳಕ್ಕೆ ತಕ್ಷಣದಲ್ಲಿ ಭೇಟಿ ನೀಡುವ ಫ್ಲೈಯಿಂಗ್ ಸ್ಕ್ವಾಡ್ ತಂಡದ ಸಿಬ್ಬಂದಿ ದೂರು ಕುರಿತಂತೆ ಅಗತ್ಯ ಕ್ರಮ ಕೈಗೊಳ್ಳಲಿದ್ದು, ಗರಿಷ್ಠ 100 ನಿಮಿಷಗಳ ಒಳಗೆ ಆ ದೂರುಗಳನ್ನು ಸಂಪೂರ್ಣ ಇತ್ಯರ್ಥಪಡಿಸಲಾಗುತ್ತದೆ. ಸಾರ್ವಜನಿಕರು ಸಿ ವಿಜಿಲ್ ಆಪ್ ಮಾತ್ರವಲ್ಲದೇ ಉಚಿತ ಸಹಾಯವಾಣಿ ಸಂಖ್ಯೆ 1950 ಗೆ ಸಹ ಚುನಾವಣಾ ಅಕ್ರಮಗಳ ಬಗ್ಗೆ ದೂರು ನೀಡಬಹುದಾಗಿದ್ದು, ಈ ಮೂಲಕ ಮುಕ್ತ, ಪಾರದರ್ಶಕ ಮತ್ತು ನ್ಯಾಯ ಸಮ್ಮತ ಚುನಾವಣೆ ನಡೆಯಲು ಚುನಾವಣಾ ಆಯೋಗದೊಂದಿಗೆ ತಾವೂ ಸಹ ಕೈ ಜೋಡಿಸಬಹುದಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!