Sunday, November 24, 2024
Sunday, November 24, 2024

ಉಡುಪಿ: ಚುನಾವಣಾ ವೆಚ್ಚ ವೀಕ್ಷಕರ ನೇಮಕ

ಉಡುಪಿ: ಚುನಾವಣಾ ವೆಚ್ಚ ವೀಕ್ಷಕರ ನೇಮಕ

Date:

ಉಡುಪಿ, ಏ. 13: ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂಧಿಸಿದಂತೆ, ಭಾರತ ಚುನಾವಣಾ ಆಯೋಗವು, ಜಿಲ್ಲೆಗೆ ವೆಚ್ಚ ವೀಕ್ಷಕರನ್ನಾಗಿ ನೇಮಿಸಿರುವ ನೇಮಿಸಿರುವ, 118 ಬೈಂದೂರು ಮತ್ತು 119 ಕುಂದಾಪುರ ವಿಧಾನಸಭಾ ಕ್ಷೇತ್ರದ ವೆಚ್ಚ ವೀಕ್ಷಕರಾದ ಭಾರತೀಯ ಕಂದಾಯ ಸೇವೆಯ ಅಧಿಕಾರಿ ಮುಕೇಶ್ ತಾರಾಚಂದ್ ತಕ್ವಾನಿ ಹಾಗೂ 120 ಉಡುಪಿ, 121 ಕಾಪು, 122 ಕಾರ್ಕಳ ವಿಧಾನಸಭಾ ಕ್ಷೇತ್ರದ ವೆಚ್ಚ ವೀಕ್ಷಕರಾದ ಭಾರತೀಯ ಕಂದಾಯ ಸೇವೆಯ ಅಧಿಕಾರಿ ಅಂಕಿತ್ ಸೋಮನಿ ಅವರುಗಳು ಕರ್ತವ್ಯಕ್ಕೆ ಹಾಜರಾಗಿರುತ್ತಾರೆ. ಇವರ ಕಚೇರಿಯನ್ನು ಉಡುಪಿ ಪ್ರವಾಸಿ ಮಂದಿರದಲ್ಲಿ ತೆರೆಯಲಾಗಿದ್ದು, ಚುನಾವಣಾ ವೆಚ್ಚ ಸಂಬಂಧಿ ದೂರುಗಳಿದ್ದಲ್ಲಿ ಸಾರ್ವಜನಿಕರು/ಜನಪ್ರತಿನಿಧಿಗಳು ಉಡುಪಿ ಬನ್ನಂಜೆಯಲ್ಲಿರುವ ಪ್ರವಾಸಿ ಮಂದಿರದಲ್ಲಿ ಚುನಾವಣಾ ವೆಚ್ಚ ವೀಕ್ಷಕರು ಅಥವಾ ಅವರ ಪ್ರತಿನಿಧಿಗಳಿಗೆ ಸಲ್ಲಿಸಬಹುದು. ಮುಕೇಶ್ ತಾರಾಚಂದ್ ತಕ್ವಾನಿ ಅವರನ್ನು ಮೊ.ಸಂ. 91413 58273, 0820-2003024 ಹಾಗೂ ಅಂಕಿತ್ ಸೋಮನಿ ಅವರನ್ನು ಮೊ.ಸಂ.87627 35948, 0820-2003020 ಮೂಲಕ ಸಂರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...

ತುಳು ಭಾವಗೀತೆ ಸ್ಪರ್ಧೆ

ಉಡುಪಿ, ನ.24: ತುಳುಕೂಟ ಉಡುಪಿ (ರಿ,) ವತಿಯಿಂದ ದಿ. ನಿಟ್ಟೂರು ಸಂಜೀವ...

ನ.28: ನರೇಂದ್ರ ಎಸ್ ಗಂಗೊಳ್ಳಿ ಅವರ ‘ನಿಭೃತ’ ಪತ್ತೇದಾರಿ ಕಾದಂಬರಿ ಬಿಡುಗಡೆ

ಉಡುಪಿ, ನ.23: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು...
error: Content is protected !!