ಬ್ರಹ್ಮಾವರ, ಏ. 18: ರುಡ್ಸೆಟ್ ಸಂಸ್ಥೆಯಲ್ಲಿ ಪಡೆದ ತರಬೇತಿಯನ್ನು ಸದುಪಯೋಗಪಡಿಸಿಕೊಂಡು ಜೀವನದಲ್ಲಿ ಸಂಸ್ಕಾರ ಮತ್ತು ಶಿಸ್ತನ್ನು ಅಳವಡಿಸಿಕೊಳ್ಳಿ ಎಂದು ಬ್ರಹ್ಮಾವರ ರುಡ್ಸೆಟ್ ಸಂಸ್ಥೆಯ ಹಳೆ ವಿದ್ಯಾರ್ಥಿ ಬ್ರಹ್ಮಾವರ ಅವಿರಾಗ್ ಸ್ಟುಡಿಯೋ ಮಾಲಕ ರಾಜೇಶ ದೇವಾಡಿಗ ಹೇಳಿದರು. ಅವರು ಬ್ರಹ್ಮಾವರ ರುಡ್ಸೆಟ್ ಸಂಸ್ಥೆಯಲ್ಲಿ 30 ದಿನಗಳ ಕಾಲ ನಡೆದ ಮೊಬೈಲ್ ರಿಪೇರಿ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಪ್ರಮಾಣ ಪತ್ರ ವಿತರಿಸಿ ಮಾತನಾಡಿದರು.
ಅಧ್ಯಕ್ಷತೆಯನ್ನು ರುಡ್ಸೆಟ್ ಸಂಸ್ಥೆಯ ನಿರ್ದೇಶಕರಾದ ಲಕ್ಷೀಶ್ ಎ. ಜಿ ವಹಿಸಿ ಮಾತನಾಡುತ್ತಾ, ಸ್ವಉದ್ಯೋಗ ಪ್ರಾರಂಭಿಸುವಾಗ ಬ್ಯಾಂಕಿನ ಸೌಲಭ್ಯಗಳನ್ನು ಬಳಸಿಕೊಳ್ಳಿ, ಸಂಸ್ಥೆ ಸದಾ ನಿಮ್ಮ ಜೊತೆ ಇರುತ್ತದೆ ಎಂದು ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಗೌರವ ಉಪನ್ಯಾಸಕರಾದ ಗುರುರಾಜ್ ಅನುಭವ ಹಂಚಿಕೊಂಡರು. ಸಂಸ್ಥೆಯ ಉಪನ್ಯಾಸಕ ಸಂತೋಷ ಶೆಟ್ಟಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ ವಂದಿಸಿದರು.