Tuesday, November 26, 2024
Tuesday, November 26, 2024

ಚುನಾವಣಾ ಕಾರ್ಯಗಳನ್ನು ಪಾರದರ್ಶಕತೆಯಿಂದ ನಿರ್ವಹಿಸಿ: ಪ್ರಾದೇಶಿಕ ಆಯುಕ್ತ ಪ್ರಕಾಶ್

ಚುನಾವಣಾ ಕಾರ್ಯಗಳನ್ನು ಪಾರದರ್ಶಕತೆಯಿಂದ ನಿರ್ವಹಿಸಿ: ಪ್ರಾದೇಶಿಕ ಆಯುಕ್ತ ಪ್ರಕಾಶ್

Date:

ಉಡುಪಿ, ಏ. 19: ಚುನಾವಣಾ ಕಾರ್ಯಗಳನ್ನು ನಿರ್ವಹಿಸುವಾಗ ಪಾರದರ್ಶಕತೆಯನ್ನು ಕಾಪಾಡುವುದರಿಂದ ಅನಾವಶ್ಯಕ ದೂರುಗಳಿಂದ ದೂರವಿರಲು ಸಾಧ್ಯವಾಗುತ್ತದೆ ಎಂದು ಪ್ರಾದೇಶಿಕ ಆಯುಕ್ತ ಪ್ರಕಾಶ್ ಹೇಳಿದರು. ಅವರು ಬುಧವಾರ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ, ಚುನಾವಣಾ ಪೂರ್ವ ತಯಾರಿ ಬಗ್ಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಚುನಾವಣಾ ಕಾರ್ಯಗಳಲ್ಲಿ ನಿಯೋಜನೆಗೊಂಡಿರುವ ಪ್ರತಿಯೊಬ್ಬ ಅಧಿಕಾರಿ ಸಿಬ್ಬಂದಿಯೂ ಚುನಾವಣಾ ಆಯೋಗ ಆಗಿಂದಾಗ್ಗೆ ನೀಡುವ ನಿರ್ದೇಶನಗಳನ್ನು ಹಾಗೂ ನಿಯಮಗಳನ್ನು ಚಾಚೂ ತಪ್ಪದೇ ಪಾಲಿಸಿದಾಗ ಚುನಾವಣಾ ಕಾರ್ಯಗಳನ್ನು ಸರಳವಾಗಿ ನಿರ್ವಹಿಸಲು ಸಾಧ್ಯವಾಗುತ್ತದೆ ಎಂದರು. ಪ್ರತಿಯೊಂದು ಮತದಾನ ಕೇಂದ್ರಗಳಲ್ಲಿಯೂ ಅಗತ್ಯ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ, ವಿದ್ಯುತ್ ಸಂಪರ್ಕ ಸೇರಿದಂತೆ ಮತ್ತಿತರ ಸೌಲಭ್ಯಗಳನ್ನು ಕಲ್ಪಿಸುವುದರ ಜೊತೆಗೆ ತುರ್ತು ಸಂದರ್ಭದಲ್ಲಿ ಪ್ರಥಮ ಚಿಕಿತ್ಸೆ ನೀಡಲು ಹೆಲ್ತ್ ಕಿಟ್ ಗಳನ್ನೂ ಸಹ ಹೊಂದಬೇಕು ಎಂದರು.

ಚುನಾವಣಾ ಕಾರ್ಯ ನಿರ್ವಹಿಸುತ್ತಿರುವವವರ ಬಗ್ಗೆ ದೂರುಗಳು ಬಂದಾಗ ಅವುಗಳ ಬಗ್ಗೆ ಸಾಕ್ಷ್ಯಾಧಾರಗಳನ್ನು ಪಡೆಯುವುದು ಅವಶ್ಯ, ಅನಾಮಧೇಯ ಪತ್ರಗಳಿಗೆ ಹೆಚ್ಚಿನ ಒತ್ತು ನೀಡುವುದು ಅವಶ್ಯವಿಲ್ಲ ಎಂದರು. ಈ ಬಾರಿ ಚುನಾವಣಾ ಆಯೋಗವು 80 ವರ್ಷ ದಾಟಿದವರಿಗೆ, ಆಂಗವಿಕಲರಿಗೆ, ಕೋವಿಡ್ ಸೋಂಕಿತರಿಗೆ ಮನೆಯಿಂದಲೇ ಮತದಾನ ಮಾಡಲು ವಿಶೇಷ ಮತದಾನ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಕಾರ್ಯಗಳನ್ನು ನಿರ್ವಹಿಸುವಾಗ ಎಲ್ಲಾ ಅಗತ್ಯ ಜಾಗೃತಿ ವಹಿಸಿ ಕಾರ್ಯ ನಿರ್ವಹಿಸಬೇಕು ಎಂದರು. ಮೇ 10 ರಂದು ನಡೆಯುವ ಮತದಾನ ದಿನದಂದು ಪ್ರತಿಯೊಬ್ಬರೂ ಮತದಾನ ಕೇಂದ್ರಗಳಿಗೆ ತೆರಳಿ ಮತ ಚಲಾಯಿಸಬೇಕು ಎಂದ ಅವರು, ಜಿಲ್ಲೆಯಲ್ಲಿ ಜಿಲ್ಲೆಯ ಸ್ವೀಪ್ ತಂಡ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು. ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಜಿಲ್ಲೆಯಲ್ಲಿ ಸುಗಮ ಚುನಾವಣೆಗೆ ಇದುವರೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಿಸಿದರು.

ADVERTISEMENT

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್., ತರಬೇತಿ ನಿರತ ಐ.ಎ.ಎಸ್ ಅಧಿಕಾರಿ ಯತೀಶ್, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್., ಎ.ಎಸ್ಪಿ ಸಿದ್ದಲಿಂಗಪ್ಪ ಹಾಗೂ ಚುನಾವಣಾ ಕಾರ್ಯಕ್ಕೆ ನಿಯೋಜಿಸಿರುವ ವಿವಿಧ ನೋಡೆಲ್ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!