ಉಡುಪಿ, ಏ. 23: ಒಟ್ಟಾಗಿ ಬೆಳೆಯೋಣ ಬಾಳೋಣ, ಯಾರನ್ನೂ ದ್ವೇಷಿಸದೆ ಶಾಂತಿಯಿಂದ ಇರೋಣ. ಇದು ಉಪನಿಷತ್ತು ಹಾಗೂ ನಮ್ಮ ಸಂಸ್ಕೃತಿ, ಕಾಂಗ್ರೆಸ್ ನ ಆಡಳಿತದ ನೀತಿಯೂ ಇದೇ ಆಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವಕ್ತಾರ ಸುಧೀರ್ ಕುಮಾರ್ ಮರೋಳಿ ಹೇಳಿದರು. ಅವರು ಉಡುಪಿ ಕಾಂಗ್ರೆಸ್ ಭವನದಲ್ಲಿ ಉಡುಪಿ ಹಾಗೂ ಬ್ರಹ್ಮಾವರ ಬ್ಲಾಕ್ ಜಂಟಿ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಉಡುಪಿ ವಿಧಾನಸಭಾ ಕ್ಷೇತ್ರದ ಮಹಿಳಾ ಸಮಾವೇಶವನ್ನುದ್ದೇಶಿಸಿ ಮಾತನಾಡಿದರು.
ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಮಾತನಾಡುತ್ತಾ, ಇಂದು ಮಹಿಳೆಯರು ಮುಂಚೂಣಿಯಲ್ಲಿದ್ದು, ಕಾಂಗ್ರೆಸ್ ಪಕ್ಷಕ್ಕೆ ಬೆಂಬಲವನ್ನು ನೀಡುತ್ತಿದ್ದಾರೆ. ಮಹಿಳೆಯರು ಬಿಜೆಪಿ ಸರಕಾರವನ್ನು ಬದಲಾಯಿಸಬೇಕೆನ್ನುವ ಆಶಯವನ್ನು ಹೊಂದಿದ್ದಾರೆ ಎಂದರು.
ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಮೈಸೂರು ವಿಭಾಗದ ಉಸ್ತುವಾರಿಗಳಾದ ನಿಧಿ ಚತುರ್ವೇದಿ, ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ವೀಕ್ಷಕರಾದ ಸುದರ್ಶನ, ಕೌಶಿಕ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ಹಿರಿಯ ಕಾಂಗ್ರೆಸ್ ನಾಯಕಿ ಸರಳಾ ಕಾಂಚನ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಗೀತಾ ವಾಗ್ಲೆ, ಉಡುಪಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮಮತಾ ಶೆಟ್ಟಿ, ಕಾಂಗ್ರೆಸ್ ಮುಖಂಡರಾದ ಅಮೃತ್ ಶೆಣೈ, ವೆರೋನಿಕಾ ಕರ್ನೇಲಿಯೋ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಮೊದಲಾದವರು ಉಪಸ್ಥಿತರಿದ್ದರು.