Thursday, September 19, 2024
Thursday, September 19, 2024

ಪ್ರತಿಭೆ, ಸಮಯ, ಸ್ಪೂರ್ತಿ ಇದ್ದರೆ ಸಾಹಿತ್ಯದ ಬೆಳವಣಿಗೆ: ನೀಲಾವರ ಸುರೇಂದ್ರ ಅಡಿಗ

ಪ್ರತಿಭೆ, ಸಮಯ, ಸ್ಪೂರ್ತಿ ಇದ್ದರೆ ಸಾಹಿತ್ಯದ ಬೆಳವಣಿಗೆ: ನೀಲಾವರ ಸುರೇಂದ್ರ ಅಡಿಗ

Date:

ಉಡುಪಿ, ಏ. 26: ಪ್ರತಿಭೆ, ಸಮಯ, ಸ್ಪೂರ್ತಿ ಇದ್ದರೆ ಸಾಹಿತ್ಯ ಬೆಳವಣಿಗೆಯಾಗುತ್ತದೆ. ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಸಾಹಿತ್ಯವನ್ನು ಮೈಗೂಡಿಸಿಕೊಳ್ಳುವುದರಿಂದ ಅವರ ಸಂಪೂರ್ಣ ವ್ಯಕ್ತಿತ್ವ ವಿಕಾಸಗೊಳ್ಳುತ್ತದೆ ಮತ್ತು ಧನಾತ್ಮಕವಾಗಿ ಚಿಂತಿಸುವುದರಿಂದ ವ್ಯಕ್ತಿ ಯಶಸ್ಸನ್ನು ಗಳಿಸಲು ಸಾಧ್ಯವಾಗುತ್ತದೆ ಎಂದು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ ಹೇಳಿದರು. ಅವರು ಉಡುಪಿಯ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಸಾಹಿತ್ಯ ಸಾಂಗತ್ಯ-6 ಕಾರ್ಯಕ್ರಮದಡಿ ಹಮ್ಮಿಕೊಂಡ ಸಾಹಿತ್ಯದೆಡೆಗೆ ಯುವಜನತೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪ್ರಾಸ್ತಾವಿಕ ಮಾತುಗಳನ್ನಾಡಿದ ಸಂಸ್ಥೆಯ ಸಂಸ್ಥಾಪಕರಲ್ಲಿ ಓರ್ವರಾದ ಅಶ್ವತ್ ಎಸ್. ಎಲ್, ಸಾಹಿತ್ಯವನ್ನು ಓದುವುದರಿಂದ ಪ್ರತಿಸ್ಪರ್ಧಿಯನ್ನು ಎದುರಿಸುವಲ್ಲಿ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಸಾಹಿತ್ಯ ಮನುಷ್ಯ ಜೀವನದ ಅವಿಭಾಜ್ಯ ಅಂಗವಾಗಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಪ್ರಾಂಶುಪಾಲರಾದ ಸ್ಟ್ಯಾನಿ ಲೋಬೋ, ಸಾಹಿತ್ಯ ಕೇವಲ ಪುಸ್ತಕಕ್ಕೆ ಸೀಮಿತವಾಗಿರದೆ ಯುವಜನತೆ ಅದನ್ನು ಮೈಗೂಡಿಸಿಕೊಂಡು ಕಾರ್ಯಪ್ರವೃತ್ತರಾಗಬೇಕು ಎಂದರು. ಸಂಸ್ಥೆಯ ಸಂಸ್ಥಾಪಕರಲ್ಲಿ ಓರ್ವರಾದ ಆದರ್ಶ ಎಂ.ಕೆ., ಬೋಧಕ ಬೋಧಕೇತರರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕ ಸಂತೋಷ್ ನಿರೂಪಿಸಿ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...

ತಾತ್ಕಾಲಿಕ ಸುಡುಮದ್ದು ಮಾರಾಟ ಪರವಾನಿಗೆ ಪಡೆಯಲು ಅರ್ಜಿ ಆಹ್ವಾನ

ಉಡುಪಿ, ಸೆ.19: ದೀಪಾವಳಿ ಹಬ್ಬದ ಸಂದರ್ಭದಲ್ಲಿ (ಅಕ್ಟೋಬರ್ 30 ರಿಂದ ನವೆಂಬರ್...

ಪವರ್ ಲಿಫ್ಟಿಂಗ್: ವೈಷ್ಣವಿ ಖಾರ್ವಿಗೆ ಬೆಳ್ಳಿ ಪದಕ

ಉಡುಪಿ, ಸೆ.19: ರಾ ಫಿಟ್ನೆಸ್ ಸಾಲಿಗ್ರಾಮ ಇವರ ವತಿಯಿಂದ ಸಾಲಿಗ್ರಾಮದ ಮೊಗವೀರ...
error: Content is protected !!