ನವದೆಹಲಿ, ಮೇ 1: ಮೇ ಮೊದಲ ದಿನದಂದು ಕೇಂದ್ರ ಸರ್ಕಾರವು ಗ್ರಾಹಕರಿಗೆ ಸಿಹಿಸುದ್ದಿ ನೀಡಿದೆ. 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ 171.50 ರೂ ಇಳಿಕೆಯಾಗಿದೆ. ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 1,856.50 ರೂ. ಇದೆ. ದೇಶೀಯ ಎಲ್ಪಿಜಿ ಅನಿಲ ಗ್ರಾಹಕರಿಗೆ ಬೆಲೆಯಲ್ಲಿ ಯಾವುದೇ ಪರಿಷ್ಕರಣೆಯಾಗಿಲ್ಲ. 14.2 ಕೆಜಿ ಗ್ಯಾಸ್ ಸಿಲಿಂಡರ್ಗಳ ದರಗಳು ಕಳೆದ ತಿಂಗಳಂತೆಯೇ ಉಳಿದಿವೆ.
ದೆಹಲಿಯಲ್ಲಿ ವಾಣಿಜ್ಯ ಅನಿಲ ಸಿಲಿಂಡರ್ ಬೆಲೆ 1856.50 ರೂ, ಕೋಲ್ಕತ್ತಾ- 1960.50 ರೂ., ಮುಂಬೈ- 1808.50 ರೂ., ಚೆನ್ನೈ- 2021.50 ರೂ.