ಉಡುಪಿ, ಮೇ 3: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ – 2023 ಕ್ಕೆ ಸಂಬಂಧಿಸಿದಂತೆ, ಮೇ 10 ರಂದು ಚುನಾವಣೆ ನಡೆಯಲಿರುವ ಹಿನ್ನೆಲೆ, ಮೇ 9 ಹಾಗೂ 10 ರಂದು ಚುನಾವಣಾ ಕರ್ತವ್ಯದ ಸಂಬಂಧ ಸಾಂದರ್ಭಿಕ ಒಪ್ಪಂದದ ಮೇರೆಗೆ ಬಸ್ಸುಗಳನ್ನು ನಿಯೋಜನೆ ಮಾಡಲಾಗುತ್ತಿದ್ದು, ಸಾರಿಗೆ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಸಾರ್ವಜನಿಕರು ಕ.ರಾ.ರ.ಸಾ ನಿಗಮದೊಂದಿಗೆ ಸಹಕರಿಸುವಂತೆ ನಿಗಮದ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.