ನವದೆಹಲಿ, ಮೇ 3: ಮೇ ಮೊದಲ ಅಥವಾ ಎರಡನೆಯ ವಾರದಲ್ಲಿ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ‘ಮೋಚಾ’ ಚಂಡಮಾರುತ ರೂಪುಗೊಳ್ಳುವ ಸಾಧ್ಯತೆಯಿದ್ದು ಈ ಚಂಡಮಾರುತ ಪಶ್ಚಿಮ ಬಂಗಾಳ ಕರಾವಳಿಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ನೀಡಿದ ಮುನ್ಸೂಚನೆ ನೀಡಿದೆ.
ಮೇ 6 ರ ಸುಮಾರಿಗೆ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಬಲಗೊಳ್ಳಲಿದ್ದು, ಮೇ 8 ಮತ್ತು 9 ರ ವೇಳೆಗೆ ಅದೇ ಪ್ರದೇಶದಲ್ಲಿ ಕಡಿಮೆ ಒತ್ತಡದ ಪ್ರದೇಶವು ರೂಪುಗೊಳ್ಳುವ ಸಾಧ್ಯತೆಯಿದೆ. ಒಡಿಶಾ ಸರ್ಕಾರ ಕರಾವಳಿ ತೀರದ 18 ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಕಟ್ಟೆಚ್ಚರ ವಹಿಸುವಂತೆ ಸೂಚಿಸಿದೆ.