ಉಡುಪಿ, ಮೇ 5: ಉಡುಪಿ ಜಿಲ್ಲೆಯ ಕೆಲವೆಡೆ ಶುಕ್ರವಾರ ಮುಂಜಾನೆ ಮಳೆಯಾಗಿದೆ. ಉಡುಪಿ, ಉದ್ಯಾವರ, ಕಟಪಾಡಿ, ಉಚ್ಚಿಲದಲ್ಲಿ ಕೆಲ ಕಾಲ ಮಳೆಯಾಗಿದೆ. ಕಾಪು ಪರಿಸರದಲ್ಲಿ ಧಾರಾಕಾರವಾಗಿ ಮಳೆ ಸುರಿದ ಕಾರಣ ಸಾರ್ವಜನಿಕರು ರಸ್ತೆಗೆ ಇಳಿಯಲಿಲ್ಲ. ಜಿಲ್ಲೆಯಾದ್ಯಂತ ಶುಕ್ರವಾರ ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣವಿತ್ತು.
ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ ಇನ್ನೂ ಎರಡು ದಿನಗಳ ಕಾಲ ರಾಜ್ಯದ ಕರಾವಳಿ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.