ಕಾರ್ಕಳ, ಮೇ 8: ಕಾರ್ಕಳ ಗಣಿತನಗರ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಶ್ರಾವ್ಯ ಮತ್ತು ತ್ರಿಶಾ ಎ ದೇವಾಡಿಗ 618 ಅಂಕಗಳೊಂದಿಗೆ ಶಾಲೆಗೆ ಪ್ರಥಮ ಸ್ಥಾನಿಗಳಾಗಿದ್ದು, ಅನ್ವಿತಾ ನಾಯಕ್ 617 ಅಂಕಗಳೊಂದಿಗೆ ದ್ವಿತೀಯ ಸ್ಥಾನ, ಕೆ ವಿಘ್ನೇಶ್ ಕಿಣಿ ಹಾಗೂ ಸ್ನೀಗ್ಧ ಯು ಶೆಟ್ಟಿ 613 ಅಂಕಗಳೊಂದಿಗೆ ತೃತೀಯ ಸ್ಥಾನ ಹಂಚಿಕೊಂಡು ಶಾಲೆಗೆ ಕೀರ್ತಿ ತಂದಿರುತ್ತಾರೆ.
ಪರೀಕ್ಷೆಗೆ ಹಾಜರಾದ 99 ವಿದ್ಯಾರ್ಥಿಗಳಲ್ಲಿ 17 ವಿದ್ಯಾರ್ಥಿಗಳು 600ಕ್ಕೂ ಹೆಚ್ಚು ಅಂಕಗಳನ್ನು ಗಳಿಸಿದ್ದಾರೆ. 5 ವಿದ್ಯಾರ್ಥಿಗಳು ಶೇಕಡ 98ಕ್ಕಿಂತ ಅಧಿಕ ಅಂಕಗಳನ್ನು ಗಳಿಸಿದ್ದಾರೆ. 58 ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿಯಲ್ಲಿ, 20 ವಿದ್ಯಾರ್ಥಿಗಳು ಶೇ. 95.00 ಕ್ಕಿಂತ ಅಧಿಕ ಅಂಕ ಹಾಗೂ 20 ವಿದ್ಯಾರ್ಥಿಗಳು ಶೇ 90.00 ಕ್ಕಿಂತ ಅಧಿಕ ಅಂಕ ಪಡೆದು ತೇರ್ಗಡೆ ಹೊಂದಿರುತ್ತಾರೆ. ಸಾಧನೆಗೈದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷರು, ಪ್ರಾಂಶುಪಾಲರು ಹಾಗೂ ಶಿಕ್ಷಕರು ಅಭಿನಂದಿಸಿದ್ದಾರೆ.