Friday, September 20, 2024
Friday, September 20, 2024

ಹಿರಿಯರೆಡೆಗೆ ಸಾಹಿತ್ಯದ ನಡಿಗೆ

ಹಿರಿಯರೆಡೆಗೆ ಸಾಹಿತ್ಯದ ನಡಿಗೆ

Date:

ಉಡುಪಿ, ಮೇ 16: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ಹಾಗೂ ಉಡುಪಿ ತಾಲೂಕು ಘಟಕದಿಂದ ‘ಹಿರಿಯರೆಡೆಗೆ ಸಾಹಿತ್ಯದ ನಡಿಗೆ’ ಕಾರ್ಯಕ್ರಮ ಮಣಿಪಾಲದಲ್ಲಿ ನಡೆಯಿತು. 91 ವರ್ಷದ ಹಿರಿಯರಾದ ವಿಠಲ ರಾವ್ ಗಂಭೀರ್ ಅವರನ್ನು ಅವರ ಸ್ವಗೃಹ ಮಣಿಪಾಲದಲ್ಲಿ ಗೌರವಿಸಲಾಯಿತು.

ಸರ್ಕಾರಿ ಕೆಲಸದಲ್ಲಿ ಇಂಜಿನಿಯರ್ ಆಗಿ ಸೇವೆ ಸಲ್ಲಿಸಿದ ವಿಠಲ್ ರಾವ್ ಅವರು ಕನ್ನಡ ನಾಡು ನುಡಿ ಸಂಸ್ಕೃತಿಗೆ ಅನನ್ಯ ಸೇವೆ ಸಲ್ಲಿಸಿದ್ದಾರೆ. ಎಂಟು ವಿವಿಧ ವಾದ್ಯಗಳನ್ನು ನುಡಿಸಬಲ್ಲ ಇವರು ಸುಮಾರು 50ಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿದ್ದಾರೆ. ಜ್ಯೋತಿಷ್ಯ ಶಾಸ್ತ್ರದಲ್ಲೂ ಪರಿಣಿತರಾಗಿರುವ ವಿಠಲ್ ರಾವ್ ಅವರನ್ನು ಗೌರವಿಸುವುದು ನಮ್ಮ ಭಾಗ್ಯ ಎಂದು ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲಾ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ, ಹಿರಿಯರಾದ ಉಪೇಂದ್ರ ಸೋಮಯಾಜಿ, ಭುವನಪ್ರಸಾದ್ ಹೆಗ್ಡೆ, ಚಂದ್ರಶೇಖರ್ ನಾವಡ, ನರಸಿಂಹಮೂರ್ತಿ, ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ., ಗೌರವ ಕಾರ್ಯದರ್ಶಿ ಜನಾರ್ದನ ಕೊಡವೂರು, ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಪ್ರಭು ಕರ್ವಾಲು ಹಾಗೂ ವಿಠಲ್ ರಾವ್ ಅವರ ಮಗ ಗಂಭೀರ್ ರಾಮಚಂದ್ರರಾವ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪುರ: ರಸ್ತೆ ಕಾಮಗಾರಿ ಪೂರ್ಣ

ಮಣಿಪುರ, ಸೆ.19: ಕಾಪು ವಿಧಾನಸಭಾ ಕ್ಷೇತ್ರದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಎಲ್ಲೋರದ ವಿಶ್ವಕರ್ಮ ಗುಹೆ

ಭಾರತವನ್ನು ಕಲೆ-ವಾಸ್ತುಶಿಲ್ಪ ಕ್ಷೇತ್ರದಲ್ಲಿ "ವಿಸ್ಮಯಗಳ ಬೀಡು" ಮತ್ತು ಜಗತ್ತಿನಲ್ಲೇ ಮುಂಚೂಣಿಯಲ್ಲಿರುವ, ಕಲಾಶೈಲಿಯಲ್ಲಿ...

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...
error: Content is protected !!