ಬೆಂಗಳೂರು, ಮೇ 17: ಕರ್ನಾಟಕದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಆಯ್ಕೆ ಖಚಿತವಾಗುತ್ತಿದಂತೆ ವರುಣ ಕ್ಷೇತ್ರದ ಸಿದ್ದರಾಮನ ಹುಂಡಿಯಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ. ಬೆಂಗಳೂರಿನ ಕುಮಾರಕೃಪಾ ಬಳಿ ಇರುವ ಸಿದ್ದರಾಮಯ್ಯ ಅವರ ನಿವಾಸದ ಸುತ್ತಮುತ್ತ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಕೆ.ಎಸ್.ಆರ್.ಪಿ ವಾಹನ ಸೇರಿ 70 ಕ್ಕೂ ಹೆಚ್ಚು ಮಂದಿಯನ್ನು ನಿಯೋಜನೆ ಮಾಡಲಾಗಿದೆ.
ನಾಳೆ ನಡೆಯುವ ಅಧಿಕಾರ ಸ್ವೀಕಾರ ಸಮಾರಂಭಕ್ಕೆ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಸಕಲ ಸಿದ್ದತೆಯನ್ನು ನಡೆಸಲಾಗುತ್ತಿದೆ. ಸ್ಥಳಕ್ಕೆ ಹಿರಿಯ ಪೋಲಿಸ್ ಅಧಿಕಾರಿಗಳು ಕೂಡ ಆಗಮಿಸಿದ್ದು, ಕಾರ್ಯಕ್ರಮದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ, ಎಲ್ಲ ರೀತಿಯ ಅಗತ್ಯ ಸಿದ್ದತೆಗಳನ್ನು ನಡೆಸಲಾಗುತ್ತಿದೆ.