Wednesday, November 27, 2024
Wednesday, November 27, 2024

ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಟ್ಯಾಂಕರ್ ನೀರು ಪೂರೈಕೆಗೆ ಕ್ರಮ ಕೈಗೊಳ್ಳಿ: ಶಾಸಕ ಯಶ್ಪಾಲ್ ಸುವರ್ಣ

ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಟ್ಯಾಂಕರ್ ನೀರು ಪೂರೈಕೆಗೆ ಕ್ರಮ ಕೈಗೊಳ್ಳಿ: ಶಾಸಕ ಯಶ್ಪಾಲ್ ಸುವರ್ಣ

Date:

ಉಡುಪಿ, ಮೇ 17: ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಟ್ಯಾಂಕರ್ ನೀರು ಪೂರೈಕೆಗೆ ಕ್ರಮಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರೊಂದಿಗೆ ಶಾಸಕ ಯಶ್ಪಾಲ್ ಸುವರ್ಣ ಚರ್ಚಿಸಿದರು.

ಉಡುಪಿ ವಿಧಾನಸಭಾ ಕ್ಷೇತ್ರದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ತಕ್ಷಣ ಸ್ಪಂದಿಸಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು ಗ್ರಾಮ ಪಂಚಾಯತ್ ಗಳಿಗೆ ನಿರ್ದೇಶನ ನೀಡುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಎಚ್ ರವರಲ್ಲಿ ಶಾಸಕರಾದ ಯಶ್ಪಾಲ್ ಸುವರ್ಣ ಚರ್ಚಿಸಿದರು.

ಗ್ರಾಮೀಣ ಭಾಗದ ಜನರಿಗೆ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಆದ್ಯತೆಯ ಮೇರೆಗೆ ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ವಿಶೇಷ ಮುತುವರ್ಜಿ ವಹಿಸಿ ತಕ್ಷಣದಿಂದಲೇ ಕಾರ್ಯಪ್ರವೃತ್ತರಾಗುವಂತೆ ನಿರ್ದೇಶನ ನೀಡುವಂತೆ ಸೂಚಿಸಿದರು. ಈ ಬಗ್ಗೆ ಉಡುಪಿ ಮತ್ತು ಬ್ರಹ್ಮಾವರ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು ಕೂಡ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿ ಕುಡಿಯುವ ನೀರಿನ ಪೂರೈಕೆಗೆ ವ್ಯವಸ್ಥೆ ಮಾಡುವಂತೆಯೂ ತಿಳಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಕಲಚೇತನರ ಸಪ್ತಾಹ ಉದ್ಘಾಟನೆ

ಉಡುಪಿ, ನ.26: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ...

ನಗರದ ಸ್ವಚ್ಛತೆಗೆ ಪೌರಕಾರ್ಮಿಕರ ಕೊಡುಗೆ ಅಮೂಲ್ಯ: ಶಾಸಕ ಯಶ್‌ಪಾಲ್ ಎ ಸುವರ್ಣ

ಉಡುಪಿ, ನ.26: ಸ್ವಚ್ಛತೆಯಲ್ಲಿ ಉಡುಪಿಯು ರಾಷ್ಟ್ರಮಟ್ಟದಲ್ಲಿ ಗುರುತಿಸಲು ಕಾರಣ ಜಿಲ್ಲೆಯ ಪೌರಕಾರ್ಮಿಕರು....

ರಥಬೀದಿ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

ಮಂಗಳೂರು, ನ.26: ಡಾ. ಪಿ. ದಯಾನಂದ ಪೈ-ಪಿ.ಸತೀಶ್ ಪೈ. ಸರ್ಕಾರಿ ಪ್ರಥಮ...

ಆಳ್ವಾಸ್ ಕಾಲೇಜಿನಲ್ಲಿ ಸಿನಿಮಾ ರಸಗ್ರಹಣ ಕಾರ್ಯಾಗಾರ

ವಿದ್ಯಾಗಿರಿ, ನ.26: ಗಾಳಿ, ನೀರು, ಅಗ್ನಿಯಷ್ಟೇ ‘ದೃಶ್ಯ-ಶ್ರವ್ಯ ಮಾಧ್ಯಮ’ವೂ ಬದುಕಿನ ಅವಿಭಾಜ್ಯ...
error: Content is protected !!