Wednesday, November 27, 2024
Wednesday, November 27, 2024

ವಿಕಲಚೇತನರಿಗೆ ವಿವಿಧ ಸೌಲಭ್ಯ: ಅರ್ಜಿ ಆಹ್ವಾನ

ವಿಕಲಚೇತನರಿಗೆ ವಿವಿಧ ಸೌಲಭ್ಯ: ಅರ್ಜಿ ಆಹ್ವಾನ

Date:

ಉಡುಪಿ, ಮೇ 19: ಪ್ರಸಕ್ತ ಸಾಲಿನಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಜಿಲ್ಲೆಯ ಅಂಗವಿಕಲರಿಗಾಗಿ, ಸರ್ಕಾರ ಅನುಷ್ಠಾನಗೊಳಿಸಿರುವ ಯೋಜನೆಗಳಾದ ವಿದ್ಯಾರ್ಥಿವೇತನ ಮತ್ತು ಪ್ರತಿಭಾ ಪ್ರೋತ್ಸಾಹಧನ, ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‌ಟಾಪ್, ಅಂಗವಿಕಲರ ದೈನಂದಿನ ಚಟುವಟಿಕೆಗಳಿಗೆ ಅಗತ್ಯವಿರುವ ಸಾಧನ ಸಲಕರಣೆ, ನಿವಾರಣಾ ಶಸ್ತ್ರಚಿಕಿತ್ಸೆಗೆ ವೈದ್ಯಕೀಯ ನೆರವು, ವಿಕಲಚೇತನರ ಬಸ್ ಪಾಸ್, ಸ್ವಯಂ ಉದ್ಯೋಗಕ್ಕಾಗಿ ಶೇ. 50 ರಷ್ಟು ಬ್ಯಾಂಕ್ ಸಾಲ ಮತ್ತು ಶೇ. 50 ಸಬ್ಸಿಡಿ ಮೂಲಕ ಆಧಾರ ಸಾಲ ಯೋಜನೆ, ಯಂತ್ರಚಾಲಿತ ದ್ವಿ-ಚಕ್ರ ವಾಹನ, ವಿಕಲಚೇತನ ವ್ಯಕ್ತಿಯನ್ನು ವಿವಾಹವಾಗುವ ಸಾಮಾನ್ಯ ವ್ಯಕ್ತಿಗೆ ವಿವಾಹ ಪ್ರೋತ್ಸಾಹಧನ, ಅಂಧ ಮಹಿಳೆಗೆ ಜನಿಸುವ ಮೊದಲನೇ ಮತ್ತು ಎರಡನೇ ಮಗುವಿನ ಪಾಲನೆಗಾಗಿ ಶಿಶುಪಾಲನಾ ಭತ್ಯೆ, ಶ್ರವಣ ದೋಷವುಳ್ಳ ವಿಕಲಚೇತನ ವ್ಯಕ್ತಿಗಳಿಗೆ ಹೊಲಿಗೆಯಂತ್ರ, ಅಂಧ ವಿದ್ಯಾರ್ಥಿಗಳಿಗೆ ಬ್ರೈಲ್ ಕಿಟ್ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಪಡೆಯಲು ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, ತಳಮಹಡಿ, ಸಿಂಡಿಕೇಟ್ ಬ್ಯಾಂಕ್ ಹತ್ತಿರ, ಜಿಲ್ಲಾ ಪಂಚಾಯತ್ ವಿಭಾಗ, ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ: 0820-2574810, 2574811 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಕಲಚೇತನರ ಸಪ್ತಾಹ ಉದ್ಘಾಟನೆ

ಉಡುಪಿ, ನ.26: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ...

ನಗರದ ಸ್ವಚ್ಛತೆಗೆ ಪೌರಕಾರ್ಮಿಕರ ಕೊಡುಗೆ ಅಮೂಲ್ಯ: ಶಾಸಕ ಯಶ್‌ಪಾಲ್ ಎ ಸುವರ್ಣ

ಉಡುಪಿ, ನ.26: ಸ್ವಚ್ಛತೆಯಲ್ಲಿ ಉಡುಪಿಯು ರಾಷ್ಟ್ರಮಟ್ಟದಲ್ಲಿ ಗುರುತಿಸಲು ಕಾರಣ ಜಿಲ್ಲೆಯ ಪೌರಕಾರ್ಮಿಕರು....

ರಥಬೀದಿ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

ಮಂಗಳೂರು, ನ.26: ಡಾ. ಪಿ. ದಯಾನಂದ ಪೈ-ಪಿ.ಸತೀಶ್ ಪೈ. ಸರ್ಕಾರಿ ಪ್ರಥಮ...

ಆಳ್ವಾಸ್ ಕಾಲೇಜಿನಲ್ಲಿ ಸಿನಿಮಾ ರಸಗ್ರಹಣ ಕಾರ್ಯಾಗಾರ

ವಿದ್ಯಾಗಿರಿ, ನ.26: ಗಾಳಿ, ನೀರು, ಅಗ್ನಿಯಷ್ಟೇ ‘ದೃಶ್ಯ-ಶ್ರವ್ಯ ಮಾಧ್ಯಮ’ವೂ ಬದುಕಿನ ಅವಿಭಾಜ್ಯ...
error: Content is protected !!