ಉಡುಪಿ, ಮೇ 21: ಉಡುಪಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಕಾಂಗ್ರೆಸ್ ಹಿರಿಯ ಮುಖಂಡ ಯು.ಆರ್. ಸಭಾಪತಿ ರವಿವಾರ ಬೆಳಗ್ಗೆ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಜನವರಿ 14, 1952 ರಲ್ಲಿ ಜನಿಸಿದ ಸಭಾಪತಿ, ವಿದ್ಯಾರ್ಥಿ ಜೀವನದಿಂದಲೇ ಸಾಮಾಜಿಕ ಕ್ಷೇತ್ರದಲ್ಲಿ ತನ್ನ ವರ್ಚಸ್ಸನ್ನು ವೃದ್ಧಿಸುತ್ತಾ ಅಪಾರ ಅಭಿಮಾನಿಗಳನ್ನು ಹೊಂದಿದರು.
ಉಡುಪಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಬಲವರ್ಧನೆಯಲ್ಲಿ ವಿಶೇಷ ಪಾತ್ರ ವಹಿಸಿದ ಸಭಾಪತಿ, ಕೈ ಟಿಕೆಟ್ ನಲ್ಲಿ ಉಡುಪಿ ಶಾಸಕರಾಗಿಯೂ ಸೇವೆ ಸಲ್ಲಿಸಿದ್ದರು. 2012 ರಲ್ಲಿ ಅವರು ಜೆಡಿಎಸ್ ಪಕ್ಷ ಸೇರಿದ್ದರೂ ಬಳಿಕ ವಾಪಾಸು ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿದ್ದರು.