ನವದೆಹಲಿ, ಮೇ 21: ಗ್ಲೋಬಲ್ ಲೀಡರ್ ಅಪ್ರೂವಲ್ ರೇಟಿಂಗ್ಸ್ ನಲ್ಲಿ ಈ ಬಾರಿಯೂ ಪ್ರಧಾನಿ ನರೇಂದ್ರ ಮೋದಿ ಅಗ್ರಸ್ಥಾನ ಪಡೆದಿದ್ದಾರೆ. ಅಮೆರಿಕ ಮೂಲದ ಸಲಹಾ ಸಂಸ್ಥೆ ‘ಮಾರ್ನಿಂಗ್ ಕನ್ಸಲ್ಟ್’ ಸಮೀಕ್ಷೆಯ ಪ್ರಕಾರ, ಪ್ರಧಾನಿ ನರೇಂದ್ರ ಮೋದಿ ಅವರು ಶೇ. 78 ಪ್ರತಿಶತ ರೇಟಿಂಗ್ನೊಂದಿಗೆ ವಿಶ್ವದ ಅತ್ಯಂತ ಜನಪ್ರಿಯ ನಾಯಕ ಎಂದು ಪರಿಗಣಿಸಲ್ಪಟ್ಟಿದ್ದಾರೆ.
ಸ್ವಿಸ್ ಅಧ್ಯಕ್ಷ ಅಲೈನ್ ಬರ್ಸೆಟ್ 62 ಪ್ರತಿಶತದೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ, ಮೆಕ್ಸಿಕೊದ ಅಧ್ಯಕ್ಷರು ಮೂರನೇ ಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ನಾಲ್ಕನೇ ಸ್ಥಾನವನ್ನು ಪಡೆದಿದ್ದಾರೆ. ಅಮೆರಿಕ ಅಧ್ಯಕ್ಷ ಜೋ ಬೈಡನ್ ಆರನೇ ಸ್ಥಾನದಲ್ಲಿದ್ದಾರೆ ಮತ್ತು ಬ್ರಿಟನ್ ಪ್ರಧಾನಿ ರಿಷಿ ಸುನಕ್ 10 ನೇ ಸ್ಥಾನದಲ್ಲಿದ್ದಾರೆ.