ಮಲ್ಪೆ, ಮೇ 31: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿ ಸಾಕ್ಷರತಾ ಅರಿವು ಕಾರ್ಯಕ್ರಮ ನಡೆಯಿತು. ಪ್ರಾಂಶುಪಾಲರಾದ ಪ್ರೊ. ಸುರೇಶ್ ರೈ ಕೆ ಕಾರ್ಯಕ್ರಮ ಉದ್ಘಾಟಿಸಿದರು. ಉಡುಪಿ ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಯೋಗನರಸಿಂಹ ಸ್ವಾಮಿಯವರು ವಿದ್ಯಾರ್ಥಿಗಳಿಗೆ ಸಾಕ್ಷರತಾ ಅರಿವಿನ ಪ್ರಾಮುಖ್ಯತೆ, ಜವಾಬ್ದಾರಿ, ಕರ್ತವ್ಯಗಳ ಮಾಹಿತಿಯನ್ನು ನೀಡಿದರು.
ಐಕ್ಯೂಎಸಿ ಸಂಚಾಲಕರಾದ ಡಾ. ಮೇವಿ ಮಿರಾಂದ, ಉಡುಪಿ ಜಿಲ್ಲಾ ಕಾರ್ಯಕ್ರಮ ಸಹಾಯಕರಾದ ಶ್ವೇತಾ, ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಡಾ. ಮಹೇಶ್ ಕುಮಾರ್, ಕೆ.ಈ., ವಾಣಿಜ್ಯಶಾಸ್ತ್ರ ಉಪನ್ಯಾಸಕ ವೆಂಕಟೇಶ ಭಟ್ ಉಪಸ್ಥಿತರಿದ್ದರು. ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ವೆಂಕಟೇಶ ಹೆಚ್.ಕೆ. ಸ್ವಾಗತಿಸಿ, ದ್ವಿತೀಯ ಬಿ.ಎಸ್ಸಿ. ವಿದ್ಯಾರ್ಥಿ ವಿಘ್ನೇಶ್ ವಂದಿಸಿದರು. ಪ್ರಥಮ ಬಿಸಿಎ ವಿದ್ಯಾರ್ಥಿನಿ ಅಂಕಿತ ನಿರೂಪಿಸಿದರು.