Monday, November 25, 2024
Monday, November 25, 2024

ಸಹಕಾರಿ ವ್ಯವಸ್ಥೆಗೆ ಧ್ವನಿಯಾಗುವೆ: ಶಾಸಕ ಯಶಪಾಲ್ ಸುವರ್ಣ

ಸಹಕಾರಿ ವ್ಯವಸ್ಥೆಗೆ ಧ್ವನಿಯಾಗುವೆ: ಶಾಸಕ ಯಶಪಾಲ್ ಸುವರ್ಣ

Date:

ಉಡುಪಿ, ಜೂನ್ 2: ಸ್ವತಃ ಸಹಕಾರಿ ರಂಗದಲ್ಲಿ ಸಾಕಷ್ಟು ಅನುಭವ ಹೊಂದಿರುವ ತಾನು, ವಿಧಾನಸಭೆಯಲ್ಲಿ ಸಹಕಾರಿಯ ಧ್ವನಿಯಾಗುವೆ ಎಂದು ಶಾಸಕ ಯಶಪಾಲ್ ಸುವರ್ಣ ಭರವಸೆ ನೀಡಿದರು. ಜಿಲ್ಲಾ ಸಹಕಾರಿ ಯೂನಿಯನ್ ವತಿಯಿಂದ ಡಯಾನ ಹೋಟೆಲ್ ಹಾಲ್ ನಲ್ಲಿ ಶುಕ್ರವಾರ ನಡೆದ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ವಿಧಾನ ಪರಿಷತ್ ಸದಸ್ಯತ್ವಕ್ಕೆ ಸಹಕಾರಿಗಳನ್ನು ಪರಿಗಣಿಸಬೇಕು ಎಂದು ಹಿಂದಿನಿಂದಲೂ ಪ್ರತಿಪಾದಿಸಿದ್ದ ನನಗೆ ಶಾಸಕನಾಗುವ ಅವಕಾಶ ಲಭಿಸಿದೆ. ಉಡುಪಿಯಲ್ಲಿ ಸಹಕಾರ ಸೌಧ ನಿರ್ಮಾಣ ಹಾಗೂ ಸಹಕಾರಿ ತರಬೇತಿ ಕೇಂದ್ರ ಸ್ಥಾಪನೆ ಬಗ್ಗೆ ಗಮನಹರಿಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಸಹಕಾರಿ ಉಪನಿರ್ದೇಶಕರಾಗಿ ಅಧಿಕಾರ ಸ್ವೀಕರಸಿದ ರಮೇಶ್ ಹಾಗೂ ಮೂಡುಬಿದಿರೆ ‌ಸಹಕಾರಿ ತರಬೇತಿ ಕೇಂದ್ರದ ನೂತನ ಪ್ರಾಂಶುಪಾಲ ಡಾ. ವಿಶ್ವೇಶ್ವರಯ್ಯ ರವರನ್ನು ಜಿಲ್ಲಾ ಸಹಕಾರಿ ಯೂನಿಯನ್ ವತಿಯಿಂದ ಅಭಿನಂದಿಸಲಾಯಿತು. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಅಧ್ಯಕ್ಷತೆ ವಹಿಸಿದ್ದರು.

ದ.ಕ. ಕೇಂದ್ರ ಸಹಕಾರ ಸಂಘ ನಿರ್ದೇಶಕ ಡಾ. ಐಕಳಬಾವ ದೇವಿಪ್ರಸಾದ ಶೆಟ್ಟಿ ಬೆಳಪು, ಯೂನಿಯನ್ ಉಪಾಧ್ಯಕ್ಷ ಅಶೋಕ್ ಬಲ್ಲಾಳ್, ಜಿಲ್ಲಾ ಸಹಕಾರಿ ಉಪನಿರ್ದೇಶಕ ರಮೇಶ್ ಇದ್ದರು. ಯೂನಿಯನ್ ನಿರ್ದೇಶಕ ಶ್ರೀಧರ ಪಿ. ಎಸ್. ಸ್ವಾಗತಿಸಿ, ನಿರೂಪಿಸಿದರು. ಸಿಇಓ ಹರೀಶ್ ಬಿ.ಪಿ. ವಂದಿಸಿದರು. ಯೂನಿಯನ್ ನಿರ್ದೇಶಕರು, ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!