ಉಡುಪಿ, ಜೂನ್ 2: 33/11 ಕೆ.ವಿ ಜಿ.ಐ.ಎಸ್ ಕೋಟ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಕೆದೂರು ಮಾರ್ಗದಲ್ಲಿ ವಾಹಕ ಬದಲಾವಣೆ ಮತ್ತು ಮಾರ್ಗ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಕೆದೂರು, ಉಳ್ತೂರು, ಶಾನಾಡಿ, ಮಲ್ಯಾಡಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜೂನ್ 3 ರಂದು ಬೆಳಗ್ಗೆ 10 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.