ಮಂಗಳೂರು, ಜೂನ್ 3: ಇಲ್ಲಿನ ವನಿತಾ ಅಚ್ಯುತ್ ಪೈ ಸಭಾಭವನದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಯುಕೆ ಆಂಡ್ ಕೋ ಬೆಂಗಳೂರು ಸ್ಥಾಪಕ ಕೆ. ಉಲ್ಲಾಸ್ ಕಾಮತ್ ಮಾತನಾಡಿ, ಸಾಮಾನ್ಯ ಜ್ಞಾನದ ಜೊತೆಗೆ ಸಾಮಾಜಿಕ ಸಂಬಂಧ ಗಟ್ಟಿ ಗೊಳಿಸಿಕೊಳ್ಳಿ. ನಗುವುದನ್ನು ಕಲಿಯಿರಿ, ಜೀವನವನ್ನು ಗಂಭೀರವಾಗಿ ತೆಗೆದುಕೊಳ್ಳಬೇಡಿ. ವಿದ್ಯಾರ್ಥಿ ಜೀವನದಲ್ಲಿ ವಿದ್ಯಾರ್ಥಿಗಳ ರೀತಿ ವರ್ತನೆ ಮಾಡಿ. ಒತ್ತಡವನ್ನು ನೀವೂ ತೆಗೆದುಕೊಳ್ಳಬೇಡಿ ಹಾಗೂ ನೀಡಬೇಡಿ. ಶಾಂತಿಯುತ ಜೀವನ ನಿಮ್ಮದಾಗಲಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಕೆನರಾ ಹೈಸ್ಕೂಲ್ ಅಸೋಸಿಯೇಷನ್ ನ ಉಪಾಧ್ಯಕ್ಷರಾದ ಪದ್ಮನಾಭ ಪೈ ಅಧ್ಯಕ್ಷ ಸ್ಥಾನ ವಹಿಸಿ ಮಾತನಾಡುತ್ತಾ, ಕೆನರಾ ಶಿಕ್ಷಣ ಸಂಸ್ಥೆಗೆ ಇತಿಹಾಸವಿದೆ. ಇಂತಹ ವಿದ್ಯಾ ಸಂಸ್ಥೆಯಲ್ಲಿ ನಿಮ್ಮ ಮಕ್ಕಳು ಸುರಕ್ಷಿತವಾಗಿರುತ್ತಾರೆ. ನಮ್ಮ ವಿದ್ಯಾ ಸಂಸ್ಥೆ ಉತ್ತಮ ವಾತಾವರಣದೊಂದಿಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಾ ಬಂದಿದೆ. ನಿರ್ಭಯರಾಗಿ ಯಶಸ್ವಿ ಜೀವನವನ್ನು ನಿಮ್ಮದಾಗಿಸಿಕೊಳ್ಳಿ ಎಂದು ಶುಭ ಹಾರೈಸಿದರು.
ಕೆನರಾ ಹೈಸ್ಕೂಲ್ ಅಸೋಸಿಯೇಷನ್ ನ ಗೌರವ ಕಾರ್ಯದರ್ಶಿಗಳಾದ ಎಂ.ರಂಗನಾಥ್ ಭಟ್ ಅವರು ಮಾತನಾಡಿ, ವಿದ್ಯಾರ್ಥಿ ದೆಸೆಯಲ್ಲಿ ಪಿಯುಸಿ ಮಹತ್ವಪೂರ್ಣ ಹಂತವಾಗಿದೆ. ಈ ಘಟ್ಟದಲ್ಲಿ ಖಚಿತವಾದ ಗುರಿಯನ್ನು ಇಟ್ಟುಕೊಂಡು ಜೀವನದಲ್ಲಿ ಸಫಲತೆಯನ್ನು ಸಾಧಿಸಿ ಎಂದರು. ಕೆನರಾ ಹೈಸ್ಕೂಲ್ ಅಸೋಸಿಯೇಷನ್ ನ ಖಜಾಂಚಿ ಹಾಗೂ ಕೆನರಾ ವಿಕಾಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಸಿ.ಎ. ಎಂ. ವಾಮನ್ ಕಾಮತ್ ಮಾತನಾಡಿ, ಸಂಸ್ಥೆಯ ಉಗಮ ಮತ್ತು ಬೆಳೆದು ಬಂದ ದಾರಿಯನ್ನು ವಿವರಿಸಿದರು. ಕೆನರಾ ಸಮೂಹ ಸಂಸ್ಥೆಗಳ ನಿರ್ದೇಶಕರಾದ ಪ್ರೊ. ಡಾ. ರಾಧಾಕೃಷ್ಣ ಎಸ್. ಐತಾಳ್ ಮಾತನಾಡುತ್ತಾ, ಜೀವನದಲ್ಲಿ ಶಿಸ್ತು, ಸ್ವ ನಿಯಂತ್ರಣ, ನಿರ್ದಿಷ್ಟ ಗುರಿ, ಧನಾತ್ಮಕ ಚಿಂತನೆ, ಆತ್ಮವಿಶ್ವಾಸದ ಜೊತೆಗೆ ಜ್ಞಾನದ ಹಸಿವು ಇರಬೇಕು ಎಂದರು.
ಕೆನರಾ ಹೈಸ್ಕೂಲ್ ಅಸೋಸಿಯೇಷನ್ ನ ಜೊತೆ ಕಾರ್ಯದರ್ಶಿಗಳಾದ ಕೆ. ಸುರೇಶ್ ಕಾಮತ್, ಕೆನರಾ ಹೈಸ್ಕೂಲ್ ಅಸೋಸಿಯೇಷನ್ ನ ಆಡಳಿತ ಮಂಡಳಿಯ ಸದಸ್ಯರು ಹಾಗೂ ಕೆನರಾ ವಿಕಾಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಯೋಜಕರಾದ ಬಸ್ತಿ ಪುರುಷೋತ್ತಮ್ ಶೆಣೈ, ಕೆನರಾ ಹೈ ಸ್ಕೂಲ್ ಅಸೋಸಿಯೇಷನ್ ನ ಆಡಳಿತ ಮಂಡಳಿಯ ಸದಸ್ಯರು ಹಾಗೂ ಕೆನರಾ ವಿಕಾಸ್ ಸಮೂಹ ಶಿಕ್ಷಣ ಸಂಸ್ಥೆಗಳ ಮ್ಯಾನೇಜರ್ ರಾಘವೇಂದ್ರ ಕುಡ್ವ, ಕೆನರಾ ಹೈಸ್ಕೂಲ್ ಅಸೋಸಿಯೇಷನ್ ನ ಆಡಳಿತ ಮಂಡಳಿಯ ಸದಸ್ಯರಾದ ಎಂ. ನರೇಶ್ ಶೆಣೈ, ಕೆನರಾ ವಿಕಾಸ್ ಕಾಲೇಜಿನ ಕ್ಯಾಂಪಸ್ ಸಂಯೋಜಕರಾದ ಪಾರ್ಥಸಾರಥಿ ಜೆ ಪಾಲೆಮಾರ್, ಅಲೆನ್ ಕೆರಿಯರ್ ಸಂಸ್ಥೆಯ ಮಂಗಳೂರು ಕೇಂದ್ರದ ಮುಖ್ಯಸ್ಥರಾದ ವಿಪಿನ್ ನಾರಾಯಣನ್ ಉಪಸ್ಥಿತರಿದ್ದರು. ಕೆನರಾ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲರುಗಳು ಆಗಮಿಸಿದ್ದರು. ಕೆನರಾ ವಿಕಾಸ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಐಶ್ವರ್ಯ ಕೆ ಸ್ವಾಗತಿಸಿ, ಉಪನ್ಯಾಸಕರಾದ ಹನೂಬ್ ಕೆ.ಸಿ. ವಂದಿಸಿದರು. ನೀಮ ಕಾರ್ಯಕ್ರಮ ನಿರೂಪಿಸಿದರು.