Friday, September 20, 2024
Friday, September 20, 2024

ತೆಂಕನಿಡಿಯೂರು ಕಾಲೇಜು: ‘ಸುದರ್ಶನ’ ಕಾಲೇಜು ಸಂಚಿಕೆ ಬಿಡುಗಡೆ

ತೆಂಕನಿಡಿಯೂರು ಕಾಲೇಜು: ‘ಸುದರ್ಶನ’ ಕಾಲೇಜು ಸಂಚಿಕೆ ಬಿಡುಗಡೆ

Date:

ಮಲ್ಪೆ, ಜೂನ್ 6: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಉಡುಪಿ ಇಲ್ಲಿ 2021-22ನೇ ಸಾಲಿನ ಕಾಲೇಜಿನ ವಾರ್ಷಿಕ ಸಂಚಿಕೆ ‘ಸುದರ್ಶನ’ವನ್ನು ಉಡುಪಿ ಶಾಸಕ ಯಶಪಾಲ್ ಎ. ಸುವರ್ಣ ಅವರು ಬಿಡುಗಡೆಗೊಳಿಸಿದರು. ವಿದ್ಯಾರ್ಥಿಗಳು ತಮ್ಮ ಅನುಭವದ ಮೂಲಕ ಕತೆ, ಕವಿತೆ, ಪ್ರಬಂಧ, ಲೇಖನ, ಚಿತ್ರಕಲೆ ಮೊದಲಾದವುಗಳನ್ನು ರಚಿಸಿ ಕಾಲೇಜು ಸಂಚಿಕೆಯನ್ನು ಚೆಂದಗಾಣಿಸಿರುವುದನ್ನು ಪ್ರಶಂಸಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸುರೇಶ್ ರೈ ಕೆ. ಅವರು ಕಾಲೇಜಿನ ವಾರ್ಷಿಕೆ ಸಂಚಿಕೆ ಸುದರ್ಶನವನ್ನು ವಿದ್ಯಾರ್ಥಿಗಳ ಪ್ರತಿಭೆಗಳ ಅನಾವರಣವಾಗಿದೆ ಎಂದರು. ನಿವೃತ್ತ ಪ್ರಾಂಶುಪಾಲರಾದ ಡಾ. ಗಣನಾಥ ಶೆಟ್ಟಿ ಎಕ್ಕಾರು, ಹೆಬ್ರಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರಸಾದ್ ರಾವ್ ಎಂ., ಐಕ್ಯೂಎಸಿ ಸಂಚಾಲಕರಾದ ಡಾ. ಮೇವಿ ಮಿರಾಂದ, ಖಜಾಂಚಿ ದಯಾನಂದ ಶೆಟ್ಟಿ ಕೊಜಕುಳಿ, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಸುಜಾತ, ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ಸಂಚಾಲಕರಾದ ರಾಧಾಕೃಷ್ಣ ಹಾಗೂ ಡಾ. ದುಗ್ಗಪ್ಪ ಕಜೆಕಾರ್ ಉಪಸ್ಥಿತರಿದ್ದರು.

ಸಂಚಿಕೆ ಸಂಪಾದಕರಾದ ಡಾ. ವೆಂಕಟೇಶ ಹೆಚ್.ಕೆ. ಸ್ವಾಗತಿಸಿ, ಉಮೇಶ್ ಪೈ ವಂದಿಸಿದರು. ಡಾ. ದುಗ್ಗಪ್ಪ ಕಜೆಕಾರ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!