ಉಡುಪಿ, ಜೂನ್ 6: ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ ಉಂಟಾಗುವ ಸಂಭವವಿದ್ದು, ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 4 ದಿನಗಳಲ್ಲಿ ಸಮುದ್ರದ ಅಲೆಗಳಲ್ಲಿ ಏರಿಳಿತ ಉಂಟಾಗುವ ಹಾಗೂ ಮಳೆಯಾಗುವ ಸಾಧ್ಯತೆ ಇರುತ್ತದೆ. ಈ ಸಂದರ್ಭದಲ್ಲಿ ಮೀನುಗಾರರು ಮೀನುಗಾರಿಕೆಗಾಗಿ ಸಮುದ್ರಕ್ಕೆ ತೆರಳುವುದನ್ನು ನಿಷೇಧಿಸಲಾಗಿದ್ದು, ಸಾರ್ವಜನಿಕರು ಹಾಗೂ ಪ್ರವಾಸಿಗರು ಸಮುದ್ರ ಹಾಗೂ ನದಿ ತೀರ ಪ್ರದೇಶಗಳಲ್ಲಿ ಇಳಿಯಬಾರದು.
ಮಕ್ಕಳು ಮತ್ತು ಸಾರ್ವಜನಿಕರು ಸಮುದ್ರ ತೀರ, ಅಪಾಯಕಾರಿ ವಿದ್ಯುತ್ ಕಂಬ, ಕಟ್ಟಡ ಹಾಗೂ ಮರಗಳ ಕೆಳಗೆ ನಿಲ್ಲಬಾರದು. ನೆರೆ ಪೀಡಿತ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಸಾರ್ವಜನಿಕರು ಸುರಕ್ಷಿತ ಸ್ಥಳಗಳಿಗೆ ತೆರಳಬೇಕು. ವಿಕೋಪಗಳಿಂದ ತೊಂದರೆ ಉಂಟಾದವರು ತಕ್ಷಣ ಸ್ಪಂದಿಸಲು ಅನುಕೂಲವಾಗುವಂತೆ 24*7 ಜಿಲ್ಲಾ ಮಟ್ಟದಲ್ಲಿ ಕಂಟ್ರೋಲ್ ರೂಂ ತೆರೆಯಲಾಗಿದ್ದು, ಉಚಿತ ಸಹಾಯವಾಣಿ ಸಂಖ್ಯೆ 1077 ಅಥವಾ 0820-2574802 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಪತ್ತು ನಿರ್ವಹಣೆ: ಕಂಟ್ರೋಲ್ ರೂಂ ಸ್ಥಾಪನೆ: ಜಿಲ್ಲೆಯಲ್ಲಿ ಮಳೆಗಾಲದ ಸಂದರ್ಭದಲ್ಲಿ ವಿಪತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಕಚೇರಿ, ತಾಲೂಕು ಮಟ್ಟ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಂಟ್ರೋಲ್ ರೂಂ ಅನ್ನು ಸ್ಥಾಪಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಉಡುಪಿ ತಹಶೀಲ್ದಾರರ ಕಚೇರಿ ಕಂಟ್ರೋಲ್ ರೂಂ ನಂ: 0820-2520417, ಬ್ರಹ್ಮಾವರ ತಹಶೀಲ್ದಾರರ ಕಚೇರಿ ಕಂಟ್ರೋಲ್ ರೂಂ ನಂ: 0820-2560494, ಕಾಪು ತಹಶೀಲ್ದಾರರ ಕಚೇರಿ ಕಂಟ್ರೋಲ್ ರೂಂ ನಂ: 0820-2551444, ಕುಂದಾಪುರ ತಹಶೀಲ್ದಾರರ ಕಚೇರಿ ಕಂಟ್ರೋಲ್ ರೂಂ ನಂ: 08254-230357, ಬೈಂದೂರು ತಹಶೀಲ್ದಾರರ ಕಚೇರಿ ಕಂಟ್ರೋಲ್ ರೂಂ ನಂ: 08254-251657, ಕಾರ್ಕಳ ತಹಶೀಲ್ದಾರರ ಕಚೇರಿ ಕಂಟ್ರೋಲ್ ರೂಂ ನಂ: 08258-230201 ಹಾಗೂ ಹೆಬ್ರಿ ತಹಶೀಲ್ದಾರರ ಕಚೇರಿ ಕಂಟ್ರೋಲ್ ರೂಂ ನಂ: 08253-250201. ಉಡುಪಿ ನಗರಸಭೆ ಕಂಟ್ರೋಲ್ ರೂಂ ನಂ: 0820-2593364, ಕುಂದಾಪುರ ಪುರಸಭೆ ಕಂಟ್ರೋಲ್ ರೂಂ ನಂ: 08254-230410, ಕಾರ್ಕಳ ಪುರಸಭೆ ಕಂಟ್ರೋಲ್ ರೂಂ ನಂ: 08258-230292, ಕಾಪು ಪುರಸಭೆ ಕಂಟ್ರೋಲ್ ರೂಂ ನಂ: 0820-2551061, ಸಾಲಿಗ್ರಾಮ ಪಟ್ಟಣ ಪಂಚಾಯತ್ ಕಂಟ್ರೋಲ್ ರೂಂ ನಂ: 0820-2564229, ಬೈಂದೂರು ಪಟ್ಟಣ ಪಂಚಾಯತ್ ಕಂಟ್ರೋಲ್ ರೂಂ ನಂ: 08254-251058 ಹಾಗೂ ಜಿಲ್ಲಾಧಿಕಾರಿಗಳ ಕಚೇರಿ ಟೋಲ್ ಫ್ರೀ ನಂ. 1077, ಕಂಟ್ರೋಲ್ ರೂಂ ನಂ: 0820-2574802 ಸ್ಥಾಪಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.