ಬೆಂಗಳೂರು, ಜೂನ್ 7: ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ನಿರ್ದೇಶಕರಾಗಿ ಡಾ. ಗಿರಿಧರ ರಾವ್ ಎಂ.ಎಸ್. ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದ್ದು, ನೂತನ ಹೆಚ್ಚುವರಿ ನಿರ್ದೇಶಕರಾಗಿ ಡಾ. ಗಿರಿಧರ ರಾವ್ ಎಂ.ಎಸ್. ಅಧಿಕಾರ ಸ್ವೀಕರಿಸಿದರು.
ಡಾ. ಗಿರಿಧರ ರಾವ್ ಎಂ.ಎಸ್. ಅವರು ಉನ್ನತ ಶಿಕ್ಷಣ ಇಲಾಖೆಯ ಮಂಗಳೂರು ಹಾಗೂ ಮೈಸೂರು ಪ್ರಾದೇಶಿಕ ಕಛೇರಿಯ ಜಂಟಿ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿಟ್ಲ ಇಲ್ಲಿ ಪ್ರಾಂಶುಪಾಲರಾಗಿಯೂ ಇವರು ಸೇವೆ ಸಲ್ಲಿಸಿದ್ದಾರೆ.