ಕೊಲ್ಲೂರು, ಜೂನ್ 8: ಜಿಲ್ಲಾ ಸಂಚಾರಿ ನೇತ್ರ ಘಟಕ ಉಡುಪಿ ಜಿಲ್ಲೆ ಇವರ ವತಿಯಿಂದ ಕೊಲ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಉಪಕೇಂದ್ರ ಕೊಲ್ಲೂರು ಎ ಇಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ ನಡೆಯಿತು. ಶಿಬಿರದಲ್ಲಿ 61 ಮಂದಿಗೆ ಕಣ್ಣಿನ ತಪಾಸಣೆ ನಡೆಸಲಾಗಿದ್ದು, 12 ಮಂದಿಗೆ ಕನ್ನಡಕವನ್ನು ಉಚಿತವಾಗಿ ನೀಡಲಾಯಿತು. ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಆಯ್ಕೆಯಾದ 30 ಮಂದಿಗೆ ಕುಂದಾಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಗುವುದು.
ಶಿಬಿರದಲ್ಲಿ ನೇತ್ರತಜ್ಞೆ ಹಾಗೂ ಜಿಲ್ಲಾ ಅಂಧತ್ವ ನಿಯಂತ್ರಣಾಧಿಕಾರಿ ಡಾ. ಲತಾ ನಾಯಕ್, ಕೊಲ್ಲೂರು ಪ್ರಾ. ಆ. ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಶೈಲೇಶ್ ಜೆ ರಾವ್, ನೇತ್ರ ಸಹಾಯಕಿ ಶುಕ್ಲತ ಹಾಗೂ ಇತರೆ ಸಿಬ್ಬಂದಿಗಳು ಉಪಸ್ಥಿತರಿದ್ದರು.