ಕಾರ್ಕಳ, ಜೂನ್ 13: ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿಗೆ ದಾಖಲಾದ ವಿದ್ಯಾರ್ಥಿಗಳಿಗೆ ನಡೆದ ವಿದ್ಯಾರ್ಥಿವೇತನ ಅರ್ಹತಾ ಪರೀಕ್ಷೆಯಲ್ಲಿ ಒಟ್ಟು ದಾಖಲಾತಿಯ ಶೇ. 10ರಷ್ಟು ವಿದ್ಯಾರ್ಥಿಗಳಿಗೆ 2023-24ನೇ ಸಾಲಿನ ಪ್ರಥಮ ಪಿಯುಸಿ ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿವೇತನ ನೀಡಲಾಯಿತು. ಕಾರ್ಕಳ ಜ್ಞಾನಸುಧಾ ಪಿಯು ಕಾಲೇಜಿಗೆ ದಾಖಲಾದ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಹಾಗೂ ಸ್ಥಳೀಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಅರ್ಹತಾ ಪರೀಕ್ಷೆಯನ್ನು ನಡೆಸಿ ವಿದ್ಯಾರ್ಥಿವೇತನಕ್ಕೆ ಆಯ್ಕೆ ಮಾಡಲಾಗಿತ್ತು.
ಇದೇ ಸಂದರ್ಭದಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಓದಿ ಎಸ್.ಎಸ್.ಎಲ್.ಸಿ.ಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಹಾಗೂ ಕಾರ್ಕಳ ತಾಲೂಕಿನ ವಿವಿಧ ಪ್ರೌಢಶಾಲೆಗಳ ಎಸ್.ಎಸ್.ಎಲ್.ಸಿ.ಯಲ್ಲಿ ಮೊದಲ ಸ್ಥಾನವನ್ನು ಪಡೆದು ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿಗೆ ದಾಖಲಾದ ವಿದ್ಯಾರ್ಥಿಗಳಿಗೂ ಕೂಡ ವಿದ್ಯಾರ್ಥಿವೇತನವನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ವತಿಯಿಂದ ನೀಡಲಾಯಿತು. ಈ ಮೂಲಕ ಟ್ರಸ್ಟ್ ವತಿಯಿಂದ 36.5 ಲಕ್ಷ ರೂ ವಿದ್ಯಾರ್ಥಿವೇತನ ವಿತರಿಸಲಾಯಿತು.
ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಕಳ ಜ್ಞಾನಸುಧಾ ಕ್ಯಾಂಪಸ್‌ನ ಸಿಇಒ ಹಾಗೂ ಪಿಯು ಪ್ರಾಂಶುಪಾಲರಾದ ದಿನೇಶ್ ಎಂ. ಕೊಡವೂರು, ಉಪ ಪ್ರಾಂಶುಪಾಲರಾದ ಸಾಹಿತ್ಯ, ಪಿ.ಆರ್.ಒ. ಜ್ಯೋತಿ ಪದ್ಮನಾಭ ಭಂಡಿ, ಡೀನ್ ಅಕಾಡೆಮಿಕ್ಸ್ ಮಿಥುನ್ ಯು., ಜ್ಞಾನಸುಧಾ ಎಂಟ್ರೆನ್ಸ್ ಅಕಾಡೆಮಿಯ ಸಂಯೋಜನಾಧಿಕಾರಿ ಸಂದೀಪ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶಕುಂತಲಾ ಎಂ ಸುವರ್ಣ, ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಪ್ರಾಂಶುಪಾಲೆ ಉಷಾ ರಾವ್ ಯು., ಉಪಪ್ರಾಂಶುಪಾಲೆ ವಾಣಿ ಕೆ., ಮುಖ್ಯನಿಲಯ ಪಾಲಕರಾದ ಮಂಜುನಾಥ್ ಮುದ್ರಾಡಿ ಮತ್ತು ಸೌಜನ್ಯ ಹೆಗ್ಡೆ ಉಪಸ್ಥಿತರಿದ್ದರು.