Wednesday, November 27, 2024
Wednesday, November 27, 2024

ಮತಾಂತರ ನಿಷೇಧ ಕಾಯಿದೆ ಹಿಂಪಡೆದರೆ ಹೋರಾಟ: ಶಾಸಕ ವೇದವ್ಯಾಸ ಕಾಮತ್

ಮತಾಂತರ ನಿಷೇಧ ಕಾಯಿದೆ ಹಿಂಪಡೆದರೆ ಹೋರಾಟ: ಶಾಸಕ ವೇದವ್ಯಾಸ ಕಾಮತ್

Date:

ಮಂಗಳೂರು, ಜೂನ್ 15: ಬಿಜೆಪಿ ಸರಕಾರದ ಅವಧಿಯಲ್ಲಿ ಜಾರಿಗೆ ಬಂದಿದ್ದ ಮತಾಂತರ ನಿಷೇಧ ಕಾಯಿದೆಯನ್ನು ವಾಪಸು ಪಡೆಯುವ ಕಾಂಗ್ರೆಸ್ ಸರಕಾರದ ನಿರ್ಧಾರವನ್ನು ಸ್ಪಷ್ಟವಾಗಿ ವಿರೋಧಿಸುವುದಾಗಿ ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ.

ಮತಾಂತರ ಎಂಬದು ಒಂದು ಸಾಮಾಜಿಕ ಪಿಡುಗು. ಇದು ಸಮಾಜದ ಅವನತಿಗೆ ಕಾರಣವಾಗಬಲ್ಲದು ಎನ್ನುವ ಸದುದ್ಧೇಶದಿಂದ ನಮ್ಮ ಸರಕಾರದ ಅವಧಿಯಲ್ಲಿ ಬಲವಂತದ ಮತಾಂತರ ನಿಷೇಧಿಸುವ ಕಾಯಿದೆ ಜಾರಿಗೊಳಿಸಲಾಗಿತ್ತು.‌ ಆದರೆ ಈಗ ಆಮಿಷಗಳನ್ನೊಡ್ಡಿ, ಬೆದರಿಸಿ ಮತಾಂತರ ಮಾಡುವವರಿಗೆ ಶಿಕ್ಷೆ ವಿಧಿಸುವ ಕಾನೂನನ್ನು ರದ್ದುಪಡಿಸುವ ನಿರ್ಧಾರ ಮೂಲಕ ಕಾಂಗ್ರೆಸ್ ಸಮಾಜಕ್ಕೆ ಏನು ಸಂದೇಶ ನೀಡಲು ಹೊರಟಿದೆ?

ಮುಕ್ತವಾಗಿ ಮತಾಂತರಗೊಳಿಸಲು ಸಮಾಜ ವಿದ್ರೋಹಿಗಳಿಗೆ ಕಾಂಗ್ರೆಸ್ ಆಹ್ವಾನ ನೀಡುತ್ತಿದೆಯೇ ಎಂದು ಅವರು ಪ್ರಶ್ನಿಸಿದ್ದಾರೆ.‌ ಬಲವಂತದಿಂದ ಮತಾಂತರ ಮಾಡುವವರಿಗೆ ಕಾನೂನಿನಡಿಯಲ್ಲಿ ಶಿಕ್ಷೆಗೊಳಪಡಿಸುವ ಕಾಯಿದೆಯನ್ನು ರದ್ದುಪಡಿಸುವ ಮೂಲಕ ರಾಜ್ಯದಲ್ಲಿ ಮತಾಂತರಿಗಳ ಅಟ್ಟಹಾಸಕ್ಕೆ ರತ್ನಕಂಬಳಿ ಹಾಸುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ನಿರಂತರವಾಗಿ ಹಿಂದೂ ಸಮಾಜವನ್ನು ಒಡೆಯುವ ಕೃತ್ಯವನ್ನು ಕಾಂಗ್ರೆಸ್ ಬೆಂಬಲಿಸುತ್ತದೆ ಎಂದು ಶಾಸಕ ಕಾಮತ್ ಆರೋಪಿಸಿದ್ದಾರೆ.

ಮತಾಂತರ ನಿಷೇಧ ಕಾಯಿದೆಯನ್ನು ವಾಪಸು ಪಡೆಯುವ ತನ್ನ ನಿರ್ಧಾರವನ್ನು ಕಾಂಗ್ರೆಸ್ ಸರಕಾರ ಹಿಂಪಡೆಯಬೇಕು. ಇಲ್ಲದೇ ಹೋದಲ್ಲಿ ಇಡೀ ಹಿಂದೂ ಸಮಾಜ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಲಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಎಚ್ಚರಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಕಲಚೇತನರ ಸಪ್ತಾಹ ಉದ್ಘಾಟನೆ

ಉಡುಪಿ, ನ.26: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ...

ನಗರದ ಸ್ವಚ್ಛತೆಗೆ ಪೌರಕಾರ್ಮಿಕರ ಕೊಡುಗೆ ಅಮೂಲ್ಯ: ಶಾಸಕ ಯಶ್‌ಪಾಲ್ ಎ ಸುವರ್ಣ

ಉಡುಪಿ, ನ.26: ಸ್ವಚ್ಛತೆಯಲ್ಲಿ ಉಡುಪಿಯು ರಾಷ್ಟ್ರಮಟ್ಟದಲ್ಲಿ ಗುರುತಿಸಲು ಕಾರಣ ಜಿಲ್ಲೆಯ ಪೌರಕಾರ್ಮಿಕರು....

ರಥಬೀದಿ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

ಮಂಗಳೂರು, ನ.26: ಡಾ. ಪಿ. ದಯಾನಂದ ಪೈ-ಪಿ.ಸತೀಶ್ ಪೈ. ಸರ್ಕಾರಿ ಪ್ರಥಮ...

ಆಳ್ವಾಸ್ ಕಾಲೇಜಿನಲ್ಲಿ ಸಿನಿಮಾ ರಸಗ್ರಹಣ ಕಾರ್ಯಾಗಾರ

ವಿದ್ಯಾಗಿರಿ, ನ.26: ಗಾಳಿ, ನೀರು, ಅಗ್ನಿಯಷ್ಟೇ ‘ದೃಶ್ಯ-ಶ್ರವ್ಯ ಮಾಧ್ಯಮ’ವೂ ಬದುಕಿನ ಅವಿಭಾಜ್ಯ...
error: Content is protected !!