ಕಾರ್ಕಳ, ಜೂನ್ 17: ರಾಜ್ಯ ಪ್ರಶಸ್ತಿ ಪುರಸ್ಕೃತ ಯುವಕ ಮಂಡಲ (ರಿ.) ಸಾಣೂರು ಇದರ ವತಿಯಿಂದ ಕಾರ್ಕಳದ ಸುರಕ್ಷಾ ಸೇವಾಶ್ರಮಕ್ಕೆ ಧನಸಹಾಯ ನೀಡಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಜಾತಾ ಶೆಟ್ಟಿ, ಗ್ರಾಮ ಪಂಚಾಯತ್ ಉಪಾಧ್ಯಕ್ಷ ಯುವಕ ಮಂಡಲದ ಅಧ್ಯಕ್ಷರಾದ ಪ್ರಸಾದ್ ಪೂಜಾರಿ, ಪಂಚಾಯತ್ ಸದಸ್ಯರಾದ ಸತೀಶ್ ಅಮಿನ್, ಸಾಮಾಜಿಕ ಕಾರ್ಯಕರ್ತರಾದ ರಾಜೇಶ್ ಬೈಪಾಸ್, ಸಾಣೂರು ಯುವಕ ಮಂಡಲದ ಮಾಜಿ ಅಧ್ಯಕ್ಷರಾದ ಜಗದೀಶ್ ಕುಮಾರ್, ಕಾರ್ಯದರ್ಶಿ ಮೋಹನ್ ಶೆಟ್ಟಿ, ಉಪಾಧ್ಯಕ್ಷ ಪ್ರಸಾದ್ ಶೆಟ್ಟಿ, ಕೋಶಾಧಿಕಾರಿ ರಾಜೇಶ್ ಪೂಜಾರಿ, ಸದಸ್ಯರುಗಳಾದ ಅನಿಲ್ ಕೋಟ್ಯಾನ್, ಪ್ರಶಾಂತ್ ಆಚಾರ್ಯ ಉಪಸ್ಥಿತರಿದ್ದರು.