ಉಡುಪಿ, ಜೂನ್ 17: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ 6 ರಿಂದ 10 ನೇ ತರಗತಿ ವರೆಗಿನ ಮಾಧ್ಯಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟುಗಳಿಂದ ವಾರ್ಷಿಕ ರೂ. 10,000 ದಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿವೇತನ ಸೌಲಭ್ಯ ಪಡೆಯಲು ಇಲಾಖಾ ವೆಬ್‌ಸೈಟ್ http://sevasindhuservices.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ರಾಜ್ಯ ಕ್ರೀಡಾ ಪ್ರಾಧಿಕಾರದಲ್ಲಿ ನೋಂದಾಯಿತ ಕ್ರೀಡಾ ಸಂಸ್ಥೆಗಳು 2022 ರ ಏಪ್ರಿಲ್ 1 ರಿಂದ 2023 ರ ಮಾರ್ಚ್ 31 ರ ವರೆಗೆ ನಡೆಸಿದ ರಾಜ್ಯಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರುವವರು, ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ಕ್ರೀಡಾ ಸಂಸ್ಥೆಗಳು ಆಯೋಜಿಸಿದ ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿರುವವರು, ರಾಷ್ಟ್ರೀಯ ಖೇಲೋ ಇಂಡಿಯಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿದ ಕ್ರೀಡಾಪಟುಗಳು ಹಾಗೂ ರಾಷ್ಟ್ರೀಯ ಶಾಲಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿದ ಕ್ರೀಡಾಪಟುಗಳು ಜುಲೈ 31 ರ ವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ದೂ.ಸಂಖ್ಯೆ: 0820-2521324, 9480886467 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.