ಉಡುಪಿ, ಜೂ. 21: ಉಡುಪಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ಗೋ ಕಳ್ಳತನ ಹಾಗೂ ಅಮಾನುಷವಾಗಿ ಅಕ್ರಮ ಗೋ ಸಾಗಾಟದ ಬಗ್ಗೆ ಸಾರ್ವಜನಿಕರಲ್ಲಿ ವ್ಯಾಪಕ ದೂರು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಪತ್ರ ಬರೆದು ಆಗ್ರಹಿಸಿದ್ದಾರೆ.
ಗೋ ಹತ್ಯೆ ನಿಷೇಧ ಕಾನೂನು ಹಿಂಪಡೆಯುವ ಬಗ್ಗೆ ಚರ್ಚೆ ಆರಂಭವಾದ ದಿನದಿಂದ ಇಂತಹ ಘಟನೆಗಳು ಹೆಚ್ಚಾಗಿರುವ ಬಗ್ಗೆ ಗ್ರಾಮೀಣ ಭಾಗದ ರೈತಾಪಿ ವರ್ಗ ಹಾಗೂ ಹೈನುಗಾರಿಕೆಯನ್ನು ಅವಲಂಬಿಸಿರುವ ಬಡ ಕೃಷಿಕರು ಚಿಂತೆಗೀಡಾಗಿದ್ದು ತಮ್ಮ ಅಸಹಾಯಕತೆ ವ್ಯಕ್ತಪಡಿಸುತ್ತಿದ್ದಾರೆ
ಪೋಲಿಸ್ ಇಲಾಖೆ ಇಂತಹ ಪ್ರಕರಣಗಳನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ತುರ್ತು ನೆಲೆಯಲ್ಲಿ ಗೋವುಗಳ ಕಳ್ಳತನ ಹಾಗೂ ಅಕ್ರಮ ಗೋ ಸಾಗಾಟವನ್ನು ತಡೆಯಲು ಪೊಲೀಸ್ ಇಲಾಖೆ ಇಂತಹ ಸೂಕ್ಷ್ಮ ಪ್ರದೇಶದಲ್ಲಿ ರಾತ್ರಿ ಗಸ್ತು ವ್ಯವಸ್ಥೆ, ಚೆಕ್ ಪೋಸ್ಟ್ ಮೂಲಕ ವಾಹನ ತಪಾಸಣೆ ಹಾಗೂ ಇಂತಹ ಚಟವಟಿಕೆಗಳಲ್ಲಿ ಗುರುತಿಸಿಕೊಂಡಿರುವ ಸಂಭಾವ್ಯ ವ್ಯಕ್ತಿಗಳ ಮೇಲೆ ನಿಗಾ ವಹಿಸುವಂತೆ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳಿಗೆ ನಿರ್ದೇಶನ ನೀಡುವಂತೆ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಪತ್ರದಲ್ಲಿ ತಿಳಿಸಿದ್ದಾರೆ.