ಉಡುಪಿ, ಜೂ. 22: ಕೊಂಕಣಿ ಭಾಷಿಗರು ಕರಾವಳಿಯಲ್ಲಿ ಸ್ವಾವಲಂಬಿಯಾಗಿ ಬೆಳೆದು ದುಡಿಯುವ ಕೈಗಳಿಗೆ ಉದ್ಯೋಗ ನೀಡುವ ಮೂಲಕ ಆರ್ಥಿಕ ಪ್ರಗತಿಗೆ ಕೊಡುಗೆಯನ್ನು ನೀಡುತ್ತಿದ್ದಾರೆ ಎಂದು ವಿಶ್ವ ವಿದ್ಯಾನಿಲಯ ಸಂಧ್ಯಾ ಕಾಲೇಜು ಮಂಗಳೂರು ಇಲ್ಲಿನ ಸಹಾಯಕ ಪ್ರಾಧ್ಯಾಪಕರಾದ ವೆಂಕಟೇಶ್ ನಾಯಕ್ ಹೇಳಿದರು.
ಅವರು ಪೂರ್ಣಪ್ರಜ್ಞ ಸಂಧ್ಯಾ ಕಾಲೇಜು ಉಡುಪಿಯಲ್ಲಿ ನಡೆದ ಕೊಂಕಣಿ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲರಾದ ಡಾ. ಸುಕನ್ಯಾ ಮೇರಿ ಜೆ., ವಿ.ವಿ ಸಂಧ್ಯಾ ಕಾಲೇಜು ಮಂಗಳೂರಿನ ಪ್ರಾಧ್ಯಾಪಕರಾದ ಡಾ. ಬಿ.ದೇವಿದಾಸ್ ಪೈ, ಕೊಂಕಣಿ ಅಧ್ಯಯನ ಪೀಠದ ಸಂಯೋಜಕರಾದ ಡಾ. ಜಯವಂತ ನಾಯಕ್ ಉಪಸ್ಥಿತರಿದ್ದರು. ಉಪನ್ಯಾಸಕಿ ಲವಿಟಾ ಡಿಸೋಜ ಸ್ವಾಗತಿಸಿ, ಉಪಪ್ರಾಂಶುಪಾಲರಾದ ವಿನಾಯಕ್ ಪೈ ಬಿ ವಂದಿಸಿದರು. ಸಹನಾ ಪೈ ಕಾರ್ಯಕ್ರಮ ನಿರೂಪಿಸಿದರು.