ಫತೇಪುರ್, ಜೂ. 27: 19 ವರ್ಷದ ಯುವತಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಆರೋಪ ಹೊತ್ತಿರುವ ವ್ಯಕ್ತಿಯೊಬ್ಬನ ಮನೆಯನ್ನು ಉತ್ತರ ಪ್ರದೇಶದ ಫತೇಪುರದಲ್ಲಿ ಅಧಿಕಾರಿಗಳು ಮಂಗಳವಾರ ನೆಲಸಮಗೊಳಿಸಿದ್ದಾರೆ. ಆರೋಪಿಯನ್ನು ಸಿಕಂದರ್ ಖಾನ್ ಎಂದು ಗುರುತಿಸಲಾಗಿದ್ದು, ಐದು ದಿನಗಳ ಹಿಂದೆ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ನಂತರ ಆಕೆಯ ತಲೆಯನ್ನು ಇಟ್ಟಿಗೆಯಿಂದ ಜಜ್ಜಿ ಕೊಲೆ ಮಾಡಿದ್ದಾನೆ.
‘ಹಿಂದೂಸ್ತಾನ್ ಟೈಮ್ಸ್’ ವರದಿಯ ಪ್ರಕಾರ, ಜೂನ್ 23 ರಂದು ಫರೀದ್ಪುರದಲ್ಲಿ ನಿರ್ಮಾಣ ಹಂತದಲ್ಲಿದ್ದ ಮನೆಯಲ್ಲಿ ಮಹಿಳೆ ಶವವಾಗಿ ಪತ್ತೆಯಾಗಿದ್ದರು. ಆಕೆಯನ್ನು ಕಾನ್ಪುರ್ ಹ್ಯಾಲೆಟ್ ಆಸ್ಪತ್ರೆಗೆ ಸಾಗಿಸಲಾಯಿತು ಮತ್ತು ಅದರ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ಪಡೆಯುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದರು ಎಂದು ವರದಿ ತಿಳಿಸಿದೆ. ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಉಪಸ್ಥಿತಿಯಲ್ಲಿ ಮತ್ತು ಭಾರಿ ಪೊಲೀಸ್ ನಿಯೋಜನೆಯ ನಡುವೆ ನೆಲಸಮ ಮಾಡಲಾಯಿತು. ಮಹಿಳೆಯನ್ನು ಬಲೆಗೆ ಬೀಳಿಸಲು ಸಿಕಂದರ್ ಖಾನ್ ತನ್ನ ಗುರುತನ್ನು ಮರೆಮಾಚಿದ್ದಾನೆ ಎಂದು ಸಂತ್ರಸ್ತೆಯ ಕುಟುಂಬ ಆರೋಪಿಸಿದೆ ಮತ್ತು ಬಲಪಂಥೀಯ ಸಂಘಟನೆಗಳು ಇದನ್ನು ‘ಲವ್ ಜಿಹಾದ್’ ಪ್ರಕರಣ ಎಂದು ಕರೆದಿವೆ ಎಂದು ವರದಿ ತಿಳಿಸಿದೆ. ಕೊಲೆ ಮತ್ತು ಅತ್ಯಾಚಾರದ ಆರೋಪದ ಮೇಲೆ ಆರೋಪಿ ಪೊಲೀಸ್ ವಶದಲ್ಲಿದ್ದಾನೆ.