ಉಡುಪಿ, ಜೂನ್ 28: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವತಿಯಿಂದ ವಿವಿಧ ವಿಶ್ವವಿದ್ಯಾನಿಲಯ ಮತ್ತು ಕಾಲೇಜುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ವಿಜ್ಞಾನ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಸಂಶೋಧನಾ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರಿಗೆ ಜುಲೈ 11 ರಿಂದ 15 ರ ವರೆಗೆ ಇಂಟಲೆಕ್ಚುವಲ್ ಪ್ರಾಪರ್ಟಿ ರೈಟ್ಸ್ ಅಂಡ್ ಎಂಟರ್‌ಪ್ರಿನೋರ್‌ಶಿಪ್ ಡೆವಲಪ್‌ಮೆಂಟ್ ವಿಷಯದ ಕುರಿತು ಕಾರ್ಯಾಗಾರವು ಬೆಂಗಳೂರು ಜಿ.ಕೆ.ವಿ.ಕೆ ಆವರಣದ ಪ್ರೊ.ಯು.ಆರ್ ರಾವ್ ವಿಜ್ಞಾನ ಭವನದ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಕಚೇರಿಯಲ್ಲಿ ನಡೆಯಲಿದೆ.
ಕಾರ್ಯಾಗಾರದಲ್ಲಿ ಭಾಗವಹಿಸಲ್ಛಿಸುವ ಪ್ರತಿನಿಧಿಗಳು ಜುಲೈ 5 ರ ಒಳಗೆ ನೋಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ದೂರವಾಣಿ ಸಂಖ್ಯೆ:080-29721550 ಅಥವಾ ಅಕಾಡೆಮಿಯ ವೆಬ್‌ಸೈಟ್ http://www.kstacademy.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.